ಕರ್ನಾಟಕ

karnataka

ETV Bharat / state

ಕೊಪ್ಪಳದಲ್ಲಿ ಇಬ್ಬರು ಸೋಂಕಿತರು ಗುಣಮುಖ... ಆಸ್ಪತ್ರೆಯಿಂದ ಬಿಡುಗಡೆ - Koppala corona news

ಕೋವಿಡ್ -19 ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ P-7104 ಹಾಗೂ P-7106 ರವರು ಸೋಂಕಿನಿಂದ ಗುಣಮುಖರಾಗಿದ್ದಾರೆ. ಇವರ ಸ್ವಾಬ್ ಟೆಸ್ಟ್ ರಿಪೋರ್ಟ್ ನೆಗಟಿವ್ ಬಂದ ಹಿನ್ನೆಲೆಯಲ್ಲಿ ಅವರನ್ನು ಇಂದು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ‌.

Koppala corona news
Koppala corona news

By

Published : Jun 25, 2020, 7:40 PM IST

ಕೊಪ್ಪಳ:ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳು ಹೆಚ್ಚುತ್ತಿರುವುದರ ನಡುವೆ ಸೋಂಕಿನಿಂದ ಗುಣಮುಖರಾಗುತ್ತಿರುವವರ ಸಂಖ್ಯೆಯೂ ಹೆಚ್ಚುತ್ತಿದೆ.

ಇಂದು ಇಬ್ಬರು ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸೋಂಕು ತಗುಲಿ ನಗರದ ನಿಗದಿತ ಕೋವಿಡ್ -19 ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ P-7104 ಹಾಗೂ P-7106 ಚಿಕಿತ್ಸೆಯಿಂದ ಗುಣಮುಖರಾಗಿದ್ದಾರೆ. ಇವರ ಸ್ವಾಬ್ ಟೆಸ್ಟ್ ರಿಪೋರ್ಟ್ ನೆಗಟಿವ್ ಬಂದ ಹಿನ್ನೆಲೆಯಲ್ಲಿ ಅವರನ್ನು ಇಂದು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ‌.

ಜಿಲ್ಲೆಯಲ್ಲಿ ಈವರೆಗೆ ಒಟ್ಟು 66 ಸೋಂಕಿತರ ಪೈಕಿ 20 ಜನರು ಗುಣಮುಖರಾಗಿದ್ದು, ಓರ್ವ ಸೋಂಕಿತರು ಸಾವಿಗೀಡಾಗಿದ್ದಾರೆ‌. ಇನ್ನುಳಿದಂತೆ 45 ಸಕ್ರಿಯ ಪ್ರಕರಣಗಳಿದ್ದು, ಚಿಕಿತ್ಸೆ ಮುಂದುವರೆದಿದೆ.

ABOUT THE AUTHOR

...view details