ಕೊಪ್ಪಳ: ಜಿಲ್ಲೆಯಲ್ಲಿ ಇಂದು ಮತ್ತೆರಡು ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 82ಕ್ಕೆ ಏರಿಕೆಯಾಗಿದೆ.
ಇಬ್ಬರಲ್ಲಿ ಸೋಂಕು ಪತ್ತೆ: ಕೊಪ್ಪಳದಲ್ಲಿ 82ಕ್ಕೇರಿದ ಸೋಂಕಿತರ ಸಂಖ್ಯೆ!
ಜಿಲ್ಲೆಯಲ್ಲಿ 82 ಜನರಿಗೆ ಮಹಾಮಾರಿ ಸೋಂಕು ತಗುಲಿದ್ದು, 21 ಮಂದಿ ಗುಣಮುಖರಾಗಿ ಮನೆ ಸೇರಿದ್ದಾರೆ. ಒಬ್ಬರು ಸೊಂಕಿಗೆ ಬಲಿಯಾಗಿದ್ದು, 60 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಜಿಲ್ಲೆಯ ಕುಷ್ಟಗಿ ಹಾಗೂ ಕೊಪ್ಪಳ ತಾಲೂಕಿನಲ್ಲಿ ತಲಾ ಒಬ್ಬರಲ್ಲಿ ಸೋಂಕು ದೃಢಪಟ್ಟಿದೆ. ಕುಷ್ಟಗಿ ತಾಲೂಕಿನ ಯರಿಗೋನಾಳ ಗ್ರಾಮದ 36 ವರ್ಷದ ಪುರುಷನಿಗೆ ಸೋಂಕು ದೃಢಪಟ್ಟಿದೆ. ಈ ವ್ಯಕ್ತಿ ಹೈದರಾಬಾದ್ನ ಟ್ರಾವೆಲ್ ಹಿಸ್ಟರಿ ಹೊಂದಿದ್ದಾರೆ. ಇನ್ನೂ, ಕೊಪ್ಪಳ ನಗರದ 67 ವರ್ಷದ ವೃದ್ಧನಲ್ಲಿ ಸೋಂಕು ಕಾಣಿಸಿಕೊಂಡಿದೆ. ಸದ್ಯ ಇಬ್ಬರನ್ನೂ ಜಿಲ್ಲೆಯ ನಿಗದಿತ ಕೋವಿಡ್-19 ಆಸ್ಪತ್ರೆಗೆ ದಾಖಲಿಸಲಾಗಿದೆ. ಸೋಂಕಿತರ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಿತರನ್ನು ಪತ್ತೆ ಮಾಡಲಾಗುತ್ತಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.
ಜಿಲ್ಲೆಯಲ್ಲಿ ಈವರೆಗೆ ಒಟ್ಟು 9,030 ಜನರ ಸ್ವಾಬ್ ಕಲೆಕ್ಟ್ ಮಾಡಲಾಗಿದೆ. ಈ ಪೈಕಿ 8,346 ಜನರ ವರದಿ ನೆಗಟಿವ್ ಬಂದಿದ್ದರೆ, 82 ಜನರ ವರದಿ ಪಾಸಿಟಿವ್ ಬಂದಿದೆ. ಸೋಂಕಿಗೆ ಒಬ್ಬರು ಬಲಿಯಾಗಿದ್ದಾರೆ. 21 ಜನರು ಸೋಂಕಿನಿಂದ ಗುಣಮುಖರಾಗಿದ್ದಾರೆ. ಇನ್ನೂ 602 ಜನರ ಲ್ಯಾಬ್ ರಿಪೋರ್ಟ್ ಬರಬೇಕಾಗಿದೆ. 60 ಸಕ್ರಿಯ ಪ್ರಕರಣಗಳಿಗೆ ಚಿಕಿತ್ಸೆ ಮುಂದುವರೆದಿದೆ.