ಕೊಪ್ಪಳ: ಜಿಲ್ಲೆಯಲ್ಲಿ ಇಂದು ಮತ್ತೆರಡು ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 84ಕ್ಕೆ ಏರಿದೆ.
ಕೊಪ್ಪಳದಲ್ಲಿ ಇಬ್ಬರಿಗೆ ಸೋಂಕು ದೃಢ...84ಕ್ಕೇರಿತು ಸೋಂಕಿತರ ಸಂಖ್ಯೆ
ಕೊಪ್ಪಳ ನಗರದ 56 ವರ್ಷದ ಮಹಿಳೆ ಹಾಗೂ ಗಂಗಾವತಿ ನಗರದ ಕಿಲ್ಲಾ ಪ್ರದೇಶದ 26 ವರ್ಷದ ಪುರುಷನಿಗೆ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 84ಕ್ಕೆ ಏರಿದೆ.
Koppala corona case
ಕೊಪ್ಪಳ ನಗರದ 56 ವರ್ಷದ ಮಹಿಳೆ ಹಾಗೂ ಗಂಗಾವತಿ ನಗರದ ಕಿಲ್ಲಾ ಪ್ರದೇಶದ 26 ವರ್ಷದ ಪುರುಷನಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ ಎಂದು ಜಿಲ್ಲಾಡಳಿತ ಅಧಿಕೃತ ಮಾಹಿತಿ ನೀಡಿದೆ. ಸೋಂಕಿತರ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಿತರನ್ನು ಪತ್ತೆ ಹಚ್ಚಲಾಗುತ್ತಿದ್ದು, ಸೋಂಕಿತರನ್ನು ಕೋವಿಡ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.
ಜಿಲ್ಲೆಯಲ್ಲಿ ಒಟ್ಟು 84 ಸೋಂಕಿತರ ಪೈಕಿ 21 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಓರ್ವ ಮಹಿಳೆ ಸಾವನ್ನಪ್ಪಿದ್ದಾಳೆ. ಸದ್ಯ 62 ಸಕ್ರಿಯ ಪ್ರಕರಣಗಳಿಗೆ ಚಿಕಿತ್ಸೆ ಮುಂದುವರೆದಿದೆ.