ಕೊಪ್ಪಳ: ಜಿಲ್ಲೆಯಲ್ಲಿಂದು 20 ನೂತನ ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗುವುದರ ಮೂಲಕ ಸೋಂಕಿತರ ಸಂಖ್ಯೆ 11,878 ಕ್ಕೆ ಏರಿಕೆಯಾದಂತಾಗಿದೆ.
ಕೊಪ್ಪಳದಲ್ಲಿಂದು 20 ಕೊರೊನಾ ಪ್ರಕರಣ: ಸೋಂಕಿತರ ಸಂಖ್ಯೆ 11,878 ಕ್ಕೆ ಏರಿಕೆ - ಕೊಪ್ಪಳ ಕೊರೊನಾ ಕೇಸಸ್
ಕೊಪ್ಪಳ ಜಿಲ್ಲೆಯಾದ್ಯಂತ ಇಂದು 20 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಒಟ್ಟು ಕೊರೊನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ 11,878 ಕ್ಕೇ ಏರಿದೆ. ಇಂದು 110 ಜನರು ಗಣಮುಖರಾಗಿದ್ದು, ಇಬ್ಬರು ಸಾವನ್ನಪ್ಪಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್, ಗಂಗಾವತಿ ತಾಲೂಕಿನಲ್ಲಿ 05, ಕೊಪ್ಪಳ 06, ಕುಷ್ಟಗಿ 04 ಹಾಗೂ ಯಲಬುರ್ಗಾ ತಾಲೂಕಿನಲ್ಲಿ 05 ಪ್ರಕರಣ ಸೇರಿ 20 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇಂದು ಇಬ್ಬರು ಸೋಂಕಿತರು ಸಾವನ್ನಪ್ಪಿದ್ದು, ಜಿಲ್ಲೆಯಲ್ಲಿ ಈವರೆಗೆ ಸೋಂಕಿನಿಂದ ಒಟ್ಟು 241 ಮಂದಿ ಮೃತಪಟ್ಟಿದ್ದಾರೆ ಎಂದು ತಿಳಿಸಿದರು.
ಇಂದು 110 ಜನರು ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗುವುದರ ಮೂಲಕ ಈವರೆಗೆ ಒಟ್ಟು 9,972 ಜನರು ಗುಣಮುಖರಾದಂತಾಗಿದೆ. 1508 ಜನ ಸೋಂಕಿತರನ್ನು ಹೋಂ ಐಸೋಲೇಷನ್ ಮಾಡಲಾಗಿದ್ದು, ಇನ್ನುಳಿದ ಪ್ರಕರಣಗಳಿಗೆ ನಿಗದಿತ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆಸಲಾಗಿದೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ.