ಕರ್ನಾಟಕ

karnataka

ETV Bharat / state

ಕೊಪ್ಪಳದಲ್ಲಿ 21ಕ್ಕೇರಿದ ಸೋಂಕಿತರ ಸಂಖ್ಯೆ.. ಇಂದು ಇಬ್ಬರು ಗುಣಮುಖ! - corona incresed in koppala

ಕೊಪ್ಪಳದಲ್ಲಿ ಈವರೆಗಿನ ಒಟ್ಟು 21 ಪಾಸಿಟಿವ್ ಪ್ರಕರಣಗಳಲ್ಲಿ ಒಟ್ಟು 11 ಜನರು ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

21 corona cases found at koppala
ಕೊಪ್ಪಳದಲ್ಲಿ 21 ಕ್ಕೇರಿದ ಸೋಂಕಿತರ ಸಂಖ್ಯೆ.

By

Published : Jun 16, 2020, 7:55 PM IST

Updated : Jun 16, 2020, 8:59 PM IST

ಕೊಪ್ಪಳ :ಜಿಲ್ಲೆಯಲ್ಲಿ ಇಂದು ಮತ್ತೆ ನಾಲ್ವರಿಗೆ ಕೊರೊನಾ ಸೋಂಕು ತಗುಲಿದೆ. ಸೋಂಕಿತರ ಸಂಖ್ಯೆ ಈಗ 21ಕ್ಕೇರಿದೆ. ಅಲ್ಲದೇ ಈ ಇಬ್ಬರು ಪುರುಷರು, ಇಬ್ಬರು ಮಹಿಳೆಯರನ್ನು ನಿಗದಿತ ಕೋವಿಡ್ -19 ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.

ಪ್ರಕಟಣೆ

ಪಿ-7451 ಗಂಗಾವತಿ ತಾಲೂಕಿನ ಶ್ರೀರಾಮನಗರ ಗ್ರಾಮದ 31 ವರ್ಷದ ಪುರುಷ, ಪಿ-7452 ಗಂಗಾವತಿ ನಗರದ 30 ವರ್ಷದ ಮಹಿಳೆ ಹಾಗೂ ಪಿ-7453 ಕಾರಟಗಿ ತಾಲೂಕಿನ ತಿಮ್ಮಾಪುರ ಗ್ರಾಮದ 29 ವರ್ಷದ ಮಹಿಳೆಗೆ ಸೋಂಕು ತಗುಲಿದೆ. ಈ ಮಹಿಳೆಯು ಪಿ-5835ನ ಪ್ರಾಥಮಿಕ ಸಂಪರ್ಕಿತೆಯಾಗಿದ್ದಾಳೆ.

ಅಲ್ಲದೇ ಪಿ-7454 ಗಂಗಾವತಿ ನಗರದ 41 ವರ್ಷದ ಪುರುಷನಿಗೆ ಸೋಂಕು ದೃಢಪಟ್ಟಿದೆ. ಆದರೆ, ಇಂದು ಮತ್ತೆ ಇಬ್ಬರು ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಪಿ-4934 ಹಾಗೂ ಪಿ-5833 ಗುಣಮುಖರಾದ ಹಿನ್ನೆಲೆ ಬಿಡುಗಡೆ ಮಾಡಲಾಗಿದೆ.

ಈವರೆಗಿನ ಒಟ್ಟು 21 ಪಾಸಿಟಿವ್ ಪ್ರಕರಣಗಳಲ್ಲಿ ಒಟ್ಟು 11 ಜನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಈಗ ಒಟ್ಟು 10 ಸಕ್ರಿಯ ಪ್ರಕರಣಗಳಿದ್ದು ಚಿಕಿತ್ಸೆ ಮುಂದುವರೆದಿದೆ. ಒಂದು ಕಡೆ ಸೋಂಕಿತರ ಸಂಖ್ಯೆ ಏರುತ್ತಿರುವುದರ ನಡುವೆ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗುತ್ತಿರೋದು ಕೂಡ ಕೊಂಚ ನಿಟ್ಟುಸಿರು ಬಿಡುವಂತಾಗಿದೆ.

Last Updated : Jun 16, 2020, 8:59 PM IST

ABOUT THE AUTHOR

...view details