ಕೊಪ್ಪಳ:ಜಿಲ್ಲೆಯಲ್ಲಿ ಇಂದು 232 ಕೊರೊನಾ ಸೋಂಕಿತ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 5,247ಕ್ಕೆ ಏರಿಕೆಯಾಗಿದೆ.
ಈ ಕುರಿತು ಮಾಹಿತಿ ನೀಡಿರುವ ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ಅವರು, ಗಂಗಾವತಿ ತಾಲೂಕಿನಲ್ಲಿ 106, ಕೊಪ್ಪಳ ತಾಲೂಕಿನಲ್ಲಿ 72, ಕುಷ್ಟಗಿ ತಾಲೂಕಿನಲ್ಲಿ 21 ಹಾಗೂ ಯಲಬುರ್ಗಾ ತಾಲೂಕಿನಲ್ಲಿ 33 ಪ್ರಕರಣ ಸೇರಿ ಇಂದು ಒಟ್ಟು 232 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ ಎಂದು ತಿಳಿಸಿದರು.
ಇಂದು 5 ಜನ ಸೋಂಕಿತರು ಸಾವನ್ನಪ್ಪಿದ್ದು ಜಿಲ್ಲೆಯಲ್ಲಿ ಈವರೆಗೆ ಸೋಂಕಿನಿಂದ ಒಟ್ಟು 119 ಜನ ಸೋಂಕಿತರು ಮೃತಪಟ್ಟಿದ್ದಾರೆ. ಇಂದು 114 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಈವರೆಗೆ ಒಟ್ಟು 3,730 ಜನರು ಗುಣಮುಖರಾಗಿದ್ದಾರೆ. 1,167 ಜನ ಸೋಂಕಿತರನ್ನು ಹೋಂ ಐಸೋಲೇಷನ್ ಮಾಡಲಾಗಿದೆ. ಇನ್ನುಳಿದ ಪ್ರಕರಣಗಳಿಗೆ ನಿಗದಿತ ಕೋವಿಡ್ -19 ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ ಎಂದು ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ಅವರು ಮಾಹಿತಿ ನೀಡಿದ್ದಾರೆ.