ಕೊಪ್ಪಳ: ಜಿಲ್ಲೆಯಲ್ಲಿ ಇಂದು 239 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4498 ಕ್ಕೆ ಏರಿಕೆಯಾಗಿದೆ.
ಕೊಪ್ಪಳದಲ್ಲಿಂದು 239 ಪಾಸಿಟಿವ್ ಪ್ರಕರಣಗಳು ಪತ್ತೆ : ಸೋಂಕಿತರ ಸಂಖ್ಯೆ 4498ಕ್ಕೆ ಏರಿಕೆ - 239 New Corona cases found in Koppal
ಕೊಪ್ಪಳ ಜಿಲ್ಲೆಯಲ್ಲಿ ಇಂದು ಹೊಸದಾಗಿ 239 ಕೊರೊನಾ ಪ್ರಕರಣಗಳು ಪತ್ತೆಯಾಗಿದೆ. ಇದರ ಜೊತೆಗೆ 221 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ಅವರು, ಇಂದು ಗಂಗಾವತಿ ತಾಲೂಕಿನಲ್ಲಿ- 113, ಕೊಪ್ಪಳ ತಾಲೂಕಿನಲ್ಲಿ 68, ಕುಷ್ಟಗಿ ತಾಲೂಕಿನಲ್ಲಿ 33 ಹಾಗೂ ಯಲಬುರ್ಗಾ ತಾಲೂಕಿನಲ್ಲಿ 25 ಪ್ರಕರಣ ಸೇರಿ ಇಂದು ಒಟ್ಟು 239 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇಂದು 5 ಜನ ಸೋಂಕಿತರು ಸಾವನ್ನಪ್ಪಿದ್ದು, ಜಿಲ್ಲೆಯಲ್ಲಿ ಈವರೆಗೆ ಸೋಂಕಿನಿಂದ ಒಟ್ಟು 104 ಜನ ಸೋಂಕಿತರು ಮೃತಪಟ್ಟಿದ್ದಾರೆ ಎಂದರು.
ಜಿಲ್ಲೆಯಲ್ಲಿ ಇಂದು 221 ಜನರು ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈವರೆಗೆ ಒಟ್ಟು 3267 ಜನರು ಗುಣಮುಖರಾಗಿದ್ದಾರೆ. 773 ಜನ ಸೋಂಕಿತರನ್ನು ಹೋಂ ಐಸೋಲೇಷನ್ ಮಾಡಲಾಗಿದೆ. ಇನ್ನುಳಿದ ಪ್ರಕರಣಗಳಿಗೆ ನಿಗದಿತ ಕೋವಿಡ್ -19 ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ.