ಕರ್ನಾಟಕ

karnataka

ETV Bharat / state

ಇಂದು 245 ಪಾಸಿಟಿವ್ ಪ್ರಕರಣ ಪತ್ತೆ.. ಕೊಪ್ಪಳದಲ್ಲಿ ಸೋಂಕಿತರ ಸಂಖ್ಯೆ 4743 ಕ್ಕೆ ಏರಿಕೆ - ಕೊಪ್ಪಳದಲ್ಲಿ ಬಿಡುಗಡೆಯಾದ ಸೋಂಕಿತರ ಸಂಖ್ಯೆ

ಕೊಪ್ಪಳದಲ್ಲಿ ಇಂದು ಸುಮಾರು 189 ಮಂದಿ ಸೋಂಕಿತರು ಸಂಪೂರ್ಣವಾಗಿ ಗುಣಮುಖರಾಗಿ ಡಿಸ್ಚಾರ್ಜ್​ ಆಗಿದ್ದಾರೆ. ಇವತ್ತು ಸುಮಾರು 245 ಹೊಸ ಕೋವಿಡ್​ ಪ್ರಕರಣಗಳು ಪತ್ತೆಯಾಗಿವೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ.

245 new corona cases found in koppala
245 ಪಾಸಿಟಿವ್ ಪ್ರಕರಣಗಳು ಪತ್ತೆ

By

Published : Aug 22, 2020, 8:45 PM IST

ಕೊಪ್ಪಳ:ಜಿಲ್ಲೆಯಲ್ಲಿ ಇಂದು 245 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4743 ಕ್ಕೆ ಏರಿಕೆಯಾಗಿದೆ.

245 ಪಾಸಿಟಿವ್ ಪ್ರಕರಣಗಳು ಪತ್ತೆ

ಈ ಕುರಿತು ಮಾಹಿತಿ ನೀಡಿದ ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್, ಗಂಗಾವತಿ ತಾಲೂಕಿನಲ್ಲಿ 116, ಕೊಪ್ಪಳ ತಾಲೂಕಿನಲ್ಲಿ 82, ಕುಷ್ಟಗಿ ತಾಲೂಕಿನಲ್ಲಿ 22 ಹಾಗೂ ಯಲಬುರ್ಗಾ ತಾಲೂಕಿನಲ್ಲಿ 25 ಪ್ರಕರಣ ಸೇರಿ ಇಂದು ಒಟ್ಟು 245 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇಂದು 5 ಜನ ಸೋಂಕಿತರು ಸಾವನ್ನಪ್ಪಿದ್ದು ಜಿಲ್ಲೆಯಲ್ಲಿ ಈವರೆಗೆ ಸೋಂಕಿನಿಂದ ಒಟ್ಟು 109 ಜನ ಸೋಂಕಿತರು ಮೃತಪಟ್ಟಿದ್ದಾರೆ. ಇಂದು ಒಂದೇ ದಿನ ಸುಮಾರು 189 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ತಿಳಿಸಿದರು.

ಇನ್ನು ಜಿಲ್ಲೆಯಲ್ಲಿ ಈವರೆಗೆ ಒಟ್ಟು 3456 ಜನರು ಗುಣಮುಖರಾಗಿದ್ದಾರೆ. 833 ಸೋಂಕಿತರನ್ನು ಹೋಂ ಐಸೋಲೇಷನ್‌ ಮಾಡಲಾಗಿದೆ. ಇನ್ನುಳಿದ ಪ್ರಕರಣಗಳಿಗೆ ನಿಗದಿತ ಕೋವಿಡ್ -19 ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ ಎಂದು ಜಿಲ್ಲಾಧಿಕಾರಿ ವಿಕಾಸ್ ಮಾಹಿತಿ ನೀಡಿದ್ದಾರೆ.

ABOUT THE AUTHOR

...view details