ಕರ್ನಾಟಕ

karnataka

ETV Bharat / state

ಕೊಪ್ಪಳದಲ್ಲಿ 272 ಪಾಸಿಟಿವ್ ಪ್ರಕರಣ ಪತ್ತೆ,160 ಮಂದಿ ಗುಣಮುಖ

ಕೊಪ್ಪಳ ಜಿಲ್ಲೆಯಲ್ಲಿ ಇಂದು ಹೊಸದಾಗಿ 272 ಜನರಿಗೆ ಕೊರೊನಾ ಸೋಂಕು ತಗುಲಿದೆ. ಇದರ ಜೊತೆಗೆ 160 ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

Koppal
Koppal

By

Published : Aug 23, 2020, 6:51 PM IST

ಕೊಪ್ಪಳ:ಜಿಲ್ಲೆಯಲ್ಲಿ ಇಂದು 272 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 5,015 ಕ್ಕೆ ಏರಿಕೆಯಾಗಿದೆ.

ಈ ಕುರಿತು ಮಾಹಿತಿ ನೀಡಿರುವ ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ಅವರು, ಇಂದು ಗಂಗಾವತಿ ತಾಲೂಕಿನಲ್ಲಿ- 173, ಕೊಪ್ಪಳ -35, ಕುಷ್ಟಗಿ- 21 ಹಾಗೂ ಯಲಬುರ್ಗಾ -43 ಪ್ರಕರಣ ಸೇರಿ ಒಟ್ಟು 272 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ.

ಇಂದು 5 ಜನ ಸೋಂಕಿತರು ಸಾವನ್ನಪ್ಪಿದ್ದು, ಜಿಲ್ಲೆಯಲ್ಲಿ ಈವರೆಗೆ ಸೋಂಕಿನಿಂದ ಒಟ್ಟು 114 ಜನರು ಮೃತಪಟ್ಟಿದ್ದಾರೆ.

ಜಿಲ್ಲೆಯಲ್ಲಿಂದು 160 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಇದುವರೆಗೆ ಒಟ್ಟು 3616 ಜನರು ಗುಣಮುಖರಾಗಿದ್ದಾರೆ.

986 ಜನ ಸೋಂಕಿತರನ್ನು ಹೋಂ ಐಸೋಲೇಷನ್‌ ಮಾಡಲಾಗಿದೆ. ಇನ್ನುಳಿದ ಪ್ರಕರಣಗಳಿಗೆ ನಿಗದಿತ ಕೋವಿಡ್ -19 ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ.

ABOUT THE AUTHOR

...view details