ಕೊಪ್ಪಳ :ಜಿಲ್ಲೆಯಲ್ಲಿ ಇಂದು 280 ಪಾಸಿಟಿವ್ ಪ್ರಕರಣ ಪತ್ತೆಯಾಗಿವೆ. 7 ಜನ ಸೋಂಕಿತರು ಸಾವನ್ನಪ್ಪಿದ್ದಾರೆ.
ಕೊಪ್ಪಳ ತಾಲೂಕಿನಲ್ಲಿ 61, ಗಂಗಾವತಿ 117, ಕುಷ್ಟಗಿ 9 ಹಾಗೂ ಯಲಬುರ್ಗಾದಲ್ಲಿನ 93 ಸೇರಿ ಜಿಲ್ಲೆಯಲ್ಲಿ ಇಂದು ಒಟ್ಟು 280 ಪಾಸಿಟಿವ್ ಪ್ರಕರಣ ಪತ್ತೆಯಾಗಿವೆ. ಈವರೆಗೆ ಒಟ್ಟು ಸೋಂಕಿತರ ಸಂಖ್ಯೆ 20,027ಕ್ಕೇರಿದೆ.
ಇಂದು ಜಿಲ್ಲೆಯಲ್ಲಿ 7 ಜನ ಸೋಂಕಿತರು ಸಾವನ್ನಪ್ಪಿದ್ದಾರೆ. ಈವರೆಗೆ ಒಟ್ಟು 323 ಜನ ಸೋಂಕಿತರು ಮೃತಪಟ್ಟಿದ್ದಾರೆ. ಇಂದು 102 ಜನರು ಗುಣಮುಖರಾಗಿದ್ದಾರೆ. ಈವರೆಗೆ ಒಟ್ಟು 15,723 ಜನರು ಗುಣಮುಖರಾಗಿದ್ದಾರೆ.
ಜಿಲ್ಲೆಯಲ್ಲಿ ಒಟ್ಟು 3981 ಸಕ್ರಿಯ ಪ್ರಕರಣಗಳಿವೆ. ಆ ಪೈಕಿ 3,601 ಸೋಂಕಿತರು ಹೋಂ ಐಸೋಲೇಷನ್‍ನಲ್ಲಿದ್ದಾರೆ. ಉಳಿದಂತೆ 380 ಜನ ಸೋಂಕಿತರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.