ಕರ್ನಾಟಕ

karnataka

ಕೊಪ್ಪಳದಲ್ಲಿ 36 ಕೊರೊನಾ ಪ್ರಕರಣಗಳು ಪತ್ತೆ: ಸೋಂಕಿತರ ಸಂಖ್ಯೆ 11,914 ಕ್ಕೆ ಏರಿಕೆ

By

Published : Oct 4, 2020, 5:24 PM IST

ಕೊಪ್ಪಳ ಜಿಲ್ಲೆಯಲ್ಲಿ ಇಂದು 36 ಹೊಸ ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಮೂವರು ಸೋಂಕಿತರು ಸಾವನ್ನಪ್ಪಿದ್ದಾರೆ ಎಂದು ಡಿಸಿ ತಿಳಿಸಿದ್ದಾರೆ.

Kopal
Kopal

ಕೊಪ್ಪಳ: ಜಿಲ್ಲೆಯಲ್ಲಿ ಇಂದು 36 ಹೊಸ ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು ಸೋಂಕಿತರ ಸಂಖ್ಯೆ 11,914 ಕ್ಕೆ ಏರಿಕೆಯಾಗಿದೆ.

ಈ ಕುರಿತು ಮಾಹಿತಿ ನೀಡಿರುವ ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ಅವರು, ಗಂಗಾವತಿ ತಾಲೂಕಿನಲ್ಲಿ 11, ಕೊಪ್ಪಳ ತಾಲೂಕಿನಲ್ಲಿ 11, ಕುಷ್ಟಗಿ ತಾಲೂಕಿನಲ್ಲಿ 04 ಹಾಗೂ ಯಲಬುರ್ಗಾ ತಾಲೂಕಿನಲ್ಲಿ 10 ಪ್ರಕರಣ ಸೇರಿ ಇಂದು ಒಟ್ಟು 36 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ ಎಂದು ತಿಳಿಸಿದ್ದಾರೆ.

ಜೊತೆಗೆ ಮೂವರು ಸೋಂಕಿತರು ಸಾವನ್ನಪ್ಪಿದ್ದು, ಜಿಲ್ಲೆಯಲ್ಲಿ ಈವರೆಗೆ ಸೋಂಕಿನಿಂದ ಒಟ್ಟು 244 ಜನ ಮೃತಪಟ್ಟಿದ್ದಾರೆ. ಇಂದು 76 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಒಟ್ಟು ಗುಣಮುಖರ ಸಂಖ್ಯೆ 10,048 ಕ್ಕೆ ಏರಿಕೆಯಾಗಿದೆ.

1,462 ಜನ ಸೋಂಕಿತರನ್ನು ಹೋಂ ಐಸೋಲೇಷನ್‌ ಮಾಡಲಾಗಿದೆ. ಇನ್ನುಳಿದ ಪ್ರಕರಣಗಳಿಗೆ ನಿಗಧಿತ ಕೋವಿಡ್ -19 ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ ಎಂದು ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ತಿಳಿಸಿದ್ದಾರೆ.

ABOUT THE AUTHOR

...view details