ಕೊಪ್ಪಳ:ಜಿಲ್ಲೆಯಲ್ಲಿ ನಿನ್ನೆ ಒಂದೇ ದಿನ ಬರೋಬ್ಬರಿ 395 ಕೊರೊನಾ ಪಾಸಿಟಿವ್ ಕೇಸ್‍ಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 16,449ಕ್ಕೆ ಏರಿಕೆಯಾಗಿದೆ.
ಕೊಪ್ಪಳ ತಾಲೂಕಿನಲ್ಲಿ 115, ಗಂಗಾವತಿ 185, ಕುಷ್ಟಗಿ 37 ಹಾಗೂ ಯಲಬುರ್ಗಾ ತಾಲೂಕಿನಲ್ಲಿ 58 ಪ್ರಕರಣ ಸೇರಿ 395 ಪಾಸಿಟಿವ್ ಕೇಸ್‍ಗಳು ಪತ್ತೆಯಾಗಿವೆ. ನಿನ್ನೆ 94 ಜನರು ಗುಣಮುಖರಾಗಿದ್ದು, ಈವರೆಗೆ ಒಟ್ಟು 14,556 ಜನರು ಗುಣಮುಖರಾಗಿದ್ದಾರೆ.