ಕೊಪ್ಪಳ: ಜಿಲ್ಲೆಯಲ್ಲಿಂದು 40 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 11,858ಕ್ಕೆ ಏರಿಕೆಯಾಗಿದೆ. ಈ ಕುರಿತು ಮಾಹಿತಿ ನೀಡಿರುವ ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್, ಗಂಗಾವತಿ ತಾಲೂಕಿನಲ್ಲಿ -11, ಕೊಪ್ಪಳದಲ್ಲಿ -12, ಕುಷ್ಟಗಿ -09 ಹಾಗೂ ಯಲಬುರ್ಗಾ ತಾಲೂಕಿನಲ್ಲಿ -08 ಪ್ರಕರಣ ಸೇರಿ ಒಟ್ಟು 40 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ.
ಕೊಪ್ಪಳ: ತಗ್ಗಿದ ಕೊರೊನಾ ಸೋಂಕಿತರ ಸಂಖ್ಯೆ.. ಇಂದು 40 ಹೊಸ ಕೇಸ್ ದೃಢ - Koppal covid Hospital
ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಇಳಿಮುಖವಾಗಿದ್ದು, ಇಂದು 40 ಹೊಸ ಪಕರಣಗಳು ಪತ್ತೆಯಾಗಿದೆ. ಅಲ್ಲದೆ ಮೂವರು ಸೋಂಕಿತರು ಬಲಿಯಾಗಿದ್ದು, ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 11,858ಕ್ಕೆ ತಲುಪಿದೆ.
ಕೊಪ್ಪಳ ಜಿಲ್ಲಾಡಳಿತ ಭವನ
ಇಂದು ಮೂವರು ಸೋಂಕಿತರು ಸಾವನ್ನಪ್ಪಿದ್ದು, ಈ ಮೂಲಕ ಜಿಲ್ಲೆಯಲ್ಲಿ ಈವರೆಗೆ ಸೋಂಕಿನಿಂದ 239 ಮಂದಿ ಮೃತಪಟ್ಟಂತಾಗಿದೆ. ಇದಲ್ಲದೆ ಇಂದು 110 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಈವರೆಗೆ ಒಟ್ಟು 9,862 ಮಂದಿ ಕೊರೊನಾದಿಂದ ಗುಣಮುಖರಾಗಿದ್ದು, 1,604 ಮಂದಿ ಸೋಂಕಿತರನ್ನು ಹೋಂ ಐಸೋಲೇಷನ್ ಮಾಡಲಾಗಿದೆ. ಇನ್ನುಳಿದ ಪ್ರಕರಣಗಳಿಗೆ ನಿಗದಿತ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.