ಕೊಪ್ಪಳ: ಜಿಲ್ಲೆಯಲ್ಲಿ ಇಂದು 41 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 13,120 ಕ್ಕೆ ಏರಿಕೆಯಾಗಿದೆ.
ಈ ಕುರಿತು ಮಾಹಿತಿ ನೀಡಿರುವ ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್, ಗಂಗಾವತಿ ತಾಲೂಕಿನಲ್ಲಿ 12, ಕೊಪ್ಪಳ ತಾಲೂಕಿನಲ್ಲಿ 11, ಕುಷ್ಟಗಿ ತಾಲೂಕಿನಲ್ಲಿ 06 ಹಾಗೂ ಯಲಬುರ್ಗಾ ತಾಲೂಕಿನಲ್ಲಿ 06 ಪ್ರಕರಣ ಸೇರಿ ಇಂದು ಒಟ್ಟು 41 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ ಎಂದು ತಿಳಿಸಿದರು.
ಇಂದು ಐದು ಜನ ಸೋಂಕಿತರು ಮೃತಪಟ್ಟಿದ್ದು, ಜಿಲ್ಲೆಯಲ್ಲಿ ಈವರೆಗೆ ಸೋಂಕಿನಿಂದ ಒಟ್ಟು 278 ಜನ ಮೃತಪಟ್ಟಿದ್ದಾರೆ. ಈ ದಿನ 49 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಈವರೆಗೆ ಒಟ್ಟು 12,251 ಜನರು ಗುಣಮುಖರಾಗಿ ಮನೆ ಸೇರಿದ್ದಾರೆ.
506 ಜನ ಸೋಂಕಿತರನ್ನು ಹೋಂ ಐಸೋಲೇಷನ್ ಮಾಡಲಾಗಿದೆ. ಇನ್ನುಳಿದ ಪ್ರಕರಣಗಳಿಗೆ ನಿಗದಿತ ಕೋವಿಡ್ -19 ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ ಎಂದು ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ತಿಳಿಸಿದ್ದಾರೆ.