ಕೊಪ್ಪಳ:ಕೊರೊನಾ ಸೋಂಕು ಹರಡುವಿಕೆ ತಡೆಗಟ್ಟುವ ಉದ್ದೇಶದಿಂದ ಇಂದಿನಿಂದ ಜಿಲ್ಲೆಯಲ್ಲಿ ಐದು ದಿನ ಸಂಪೂರ್ಣ ಲಾಕ್‌ಡೌನ್ ಜಾರಿ ಮಾಡಿದ್ದು, ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ.
ಕೋವಿಡ್ ಸೋಂಕು ಹೆಚ್ಚಳ: ಕೊಪ್ಪಳ ಜಿಲ್ಲೆ 5 ದಿನ ಸಂಪೂರ್ಣ ಲಾಕ್ - ಕೊಪ್ಪಳ
ಕೋವಿಡ್ ಸೋಂಕು ಹೆಚ್ಚಳ ಹಿನ್ನೆಲೆಯಲ್ಲಿ ಇಂದಿನಿಂದ ಮೇ 21ರವರೆಗೆ ಕೊಪ್ಪಳದಲ್ಲಿ ಸಂಪೂರ್ಣ ಲಾಕ್ ಡೌನ್ ಜಾರಿ ಮಾಡಲಾಗಿದೆ.
ಕೊಪ್ಪಳ
ಆರೋಗ್ಯ ಸೇವೆ, ಔಷಧಿ, ಹಾಲು, ಕೈಗಾರಿಕೆ ಹೊರತುಪಡಿಸಿ ಉಳಿದೆಲ್ಲಾ ಚಟುವಟಿಕೆಗಳಿಗೆ ಸಂಪೂರ್ಣ ನಿರ್ಬಂಧ ಹೇರಲಾಗಿದೆ. ಹೀಗಾಗಿ ಬೆಳಿಗ್ಗೆಯೇ ಪೊಲೀಸರು ರಸ್ತೆಗಿಳಿದಿದ್ದು, ಅನಗತ್ಯವಾಗಿ ಓಡಾಡುವವರಿಗೆ ಬಿಸಿ ಮುಟ್ಟಿಸಲಿದ್ದಾರೆ.
ನಗರದಲ್ಲಿ ಎಲ್ಲ ಅಂಗಡಿಗಳು ಬಂದ್ ಆಗಿದ್ದು, ರಸ್ತೆಗಳಲ್ಲಿ ವಾಹನಗಳ ಹಾಗೂ ಜನರ ಓಡಾಟ ವಿರಳವಾಗಿದೆ.