ಕೊಪ್ಪಳ: ಕೊರೊನಾ ಟೆಸ್ಟ್ ಮಾಡಿಸಿಕೊಂಡವರಿಗೆ ಜಿಲ್ಲೆಯ ಗ್ರಾಮ ಪಂಚಾಯತ್ ಅಧ್ಯಕ್ಷರೊಬ್ಬರು ಬಂಪರ್ ಆಫರ್ ಘೋಷಣೆ ಮಾಡಿದ್ದಾರೆ.
ಗಂಗಾವತಿ ತಾಲೂಕಿನ ಕೆಸಹರಟ್ಟಿ ಗ್ರಾಮ ಪಂಚಾಯತ್ ಅಧ್ಯಕ್ಷ ಬಸವರಾಜ್, ಗ್ರಾಮದಲ್ಲಿನ ಜನರು ಕೊರೊನಾ ಟೆಸ್ಟ್ ಮಾಡಿಸಿಕೊಂಡರೆ ಐದು ನೂರು ರೂಪಾಯಿ ನೀಡುವುದಾಗಿ ಘೋಷಣೆ ಮಾಡಿ ಇಂದು ಟೆಸ್ಟ್ ಮಾಡಿಸಿಕೊಂಡ ಅನೇಕರಿಗೆ 500 ರೂ. ನೀಡಿದ್ದಾರೆ.
ಇಂದು ಕೆಸರಹಟ್ಟಿ ಗ್ರಾಮದಲ್ಲಿ ಕೋವಿಡ್ ಪರೀಕ್ಷೆ ಮಾದರಿ ತೆಗೆದುಕೊಳ್ಳುವ ಕಾರ್ಯಕ್ರಮ ಇತ್ತು. ಕೋವಿಡ್ ಟೆಸ್ಟ್ ಮಾಡಿಸಲು ಜನರ ಹಿಂದೇಟು ಹಾಕಿದರು. ಜನರನ್ನು ಆಕರ್ಷಿಸಲು ಗ್ರಾಮ ಪಂಚಾಯತ್ ಅಧ್ಯಕ್ಷ ಬಸವರಾಜ ಅವರು 500 ರೂ. ಪ್ರೋತ್ಸಾಹ ಧನ ಘೋಷಣೆ ಮಾಡಿದರು.
ಯಾರು ಸ್ವ ಇಚ್ಛೆಯಿಂದ ಮುಂದೆ ಬಂದು ಕೊರೊನಾ ಟೆಸ್ಟ್ ಮಾಡಿಸುತ್ತಾರೆಯೋ, ಅವರಿಗೆ ₹500 ಪ್ರೋತ್ಸಾಹ ಧನ ನೀಡಲಾಗುವುದು ಎಂದು ಘೊಷಣೆ ಮಾಡಿದ ಬಳಿಕ ಅನೇಕ ಜನರು ಟೆಸ್ಟ್ ಮಾಡಿಸಿಕೊಂಡಿದ್ದಾರೆ. ಪ್ರೋತ್ಸಾಹ ಧನ ಘೊಷಣೆ ನಂತರ ಒಟ್ಟು 121 ಜನರಿಗೆ ಟೆಸ್ಟ್ ಮಾಡಲಾಗಿದೆ ಎಂದು ತಿಳಿದು ಬಂದಿದೆ.