ಕರ್ನಾಟಕ

karnataka

ETV Bharat / state

ಕೊಪ್ಪಳ ಜಿಲ್ಲೆಯಲ್ಲಿ 63 ಪಾಸಿಟಿವ್ ಪ್ರಕರಣಗಳು ಪತ್ತೆ: ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ 10641 - ಕೊರೊನಾ ಲೇಟೆಸ್ಟ್​ ನ್ಯೂಸ್​

ಕೊಪ್ಪಳ ಜಿಲ್ಲೆಯಲ್ಲಿ ಇಂದು ಒಟ್ಟು 63 ಹೊಸ ಸೋಂಕಿತ ಪ್ರಕರಣಗಳು ದೃಢಪಟ್ಟಿದ್ದು, ಇಂದು ಒಂದೇ ದಿನ ಸುಮಾರು 147 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆಗಿದ್ದಾರೆ.

new kovid cases from koppala
ಕೊಪ್ಪಳದಲ್ಲಿ ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆ

By

Published : Sep 21, 2020, 9:38 PM IST

ಕೊಪ್ಪಳ:ಜಿಲ್ಲೆಯಲ್ಲಿ ಇಂದು 63 ಹೊಸ ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 10641 ಕ್ಕೆ ಏರಿಕೆಯಾಗಿದೆ.

ಕೊಪ್ಪಳದಲ್ಲಿ ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆ

ಈ ಕುರಿತು ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ಮಾಹಿತಿ ನೀಡಿದ್ದು, ಗಂಗಾವತಿ ತಾಲೂಕಿನಲ್ಲಿ- 8, ಕೊಪ್ಪಳ ತಾಲೂಕಿನಲ್ಲಿ 18, ಕುಷ್ಟಗಿ ತಾಲೂಕಿನಲ್ಲಿ 25 ಹಾಗೂ ಯಲಬುರ್ಗಾ ತಾಲೂಕಿನಲ್ಲಿ 12 ಪ್ರಕರಣ ಸೇರಿ ಇಂದು ಒಟ್ಟು 63 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ ಎಂದಿದ್ದಾರೆ. ಇಂದು ಇಬ್ಬರು ಸೋಂಕಿತರು ಸಾವನ್ನಪ್ಪಿದ್ದು, ಜಿಲ್ಲೆಯಲ್ಲಿ ಈವರೆಗೆ ಸೋಂಕಿನಿಂದ ಒಟ್ಟು 227 ಜನ ಸೋಂಕಿತರು ಮೃತಪಟ್ಟಿದ್ದಾರೆ.

ಇಂದು 147 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಈವರೆಗೆ ಒಟ್ಟು 8387 ಜನರು ಗುಣಮುಖರಾಗಿದ್ದಾರೆ. 1781 ಜನ ಸೋಂಕಿತರನ್ನು ಹೋಂ ಐಸೋಲೇಷನ್‌ ಮಾಡಲಾಗಿದೆ. ಇನ್ನುಳಿದ ಸೋಂಕಿತರಿಗೆ ನಿಗದಿತ ಕೋವಿಡ್ -19 ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ ಎಂದು ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ತಿಳಿಸಿದ್ದಾರೆ.

ABOUT THE AUTHOR

...view details