ಕೊಪ್ಪಳ: ಕೊರೊನಾ ಎರಡನೇ ಅಲೆ ತೀವ್ರವಾಗುತ್ತಿದ್ದು, ಜಿಲ್ಲೆಯಲ್ಲಿ ಒಂದೇ ದಿನ ಬರೋಬ್ಬರಿ 65 ಪಾಸಿಟಿವ್ ಕೇಸ್‍ಗಳು ಪತ್ತೆಯಾಗಿ ಆತಂಕ ಮೂಡುವಂತಾಗಿದೆ.
ಕೊಪ್ಪಳದಲ್ಲಿ ಒಂದೇ ದಿನ 65 ಪಾಸಿಟಿವ್ ಪ್ರಕರಣ ಪತ್ತೆ: ಹೆಚ್ಚಿದ ಆತಂಕ - ಕೊಪ್ಪಳ ಕೋವಿಡ್ ರಿಪೋರ್ಟ್
ಕೊಪ್ಪಳ ತಾಲೂಕಿನಲ್ಲಿ 27, ಗಂಗಾವತಿ-20, ಕುಷ್ಟಗಿ-16 ಹಾಗೂ ಯಲಬುರ್ಗಾ ತಾಲೂಕಿನಲ್ಲಿ 2 ಪ್ರಕರಣ ಸೇರಿ ಒಟ್ಟು 65 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ದಿನೇ ದಿನೆ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದು, ಜಿಲ್ಲೆಯ ಜನರನ್ನು ಆತಂಕಕ್ಕೀಡು ಮಾಡಿದೆ.
ಇಂದು ಬರೋಬ್ಬರಿ 65 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಈವರೆಗೆ ಒಟ್ಟು 14421 ಪಾಸಿಟಿವ್ ಪ್ರಕರಣಗಳು ಪತ್ತೆಯಾದಂತಾಗಿದೆ. ಕೊಪ್ಪಳ ತಾಲೂಕಿನಲ್ಲಿ 27, ಗಂಗಾವತಿ-20, ಕುಷ್ಟಗಿ-16 ಹಾಗೂ ಯಲಬುರ್ಗಾ ತಾಲೂಕಿನಲ್ಲಿ 2 ಪ್ರಕರಣ ಸೇರಿ ಒಟ್ಟು 65 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ.
ಜಿಲ್ಲೆಯಲ್ಲಿ ಒಟ್ಟು 282 ಸಕ್ರಿಯ ಪ್ರಕರಣಗಳಿದ್ದು, 242 ಸೋಂಕಿತರು ಹೋಂ ಐಸೋಲೇಷನ್‍ನಲ್ಲಿದ್ದಾರೆ. ಉಳಿದಂತೆ 36 ಜನ ಸೋಂಕಿತರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು 42 ಜನರು ಗುಣಮುಖರಾಗಿದ್ದಾರೆ. ಈವರೆಗೆ ಒಟ್ಟು 13853 ಜನರು ಗುಣಮುಖರಾದಂತಾಗಿದೆ. ದಿನೇ ದಿನೆ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದು, ಜಿಲ್ಲೆಯ ಜನರನ್ನು ಆತಂಕಕ್ಕೀಡು ಮಾಡಿದೆ.