ಕರ್ನಾಟಕ

karnataka

ETV Bharat / state

ಏಳು ಜನರ ಬಲಿ ಪಡೆದ ಕೊರೊನಾ, 202 ಮಂದಿಗೆ ಸೋಂಕು ದೃಢ - Koppala corona cases

ಕೊಪ್ಪಳದ ಇಂದಿನ ಕೊರೊನಾ ವೈರಸ್‌ ಸೋಂಕಿತ ಪ್ರಕರಣಗಳ ವಿವರ ಇಲ್ಲಿದೆ..

Koppala corona cases
Koppala corona cases

By

Published : Aug 30, 2020, 7:17 PM IST

ಕೊಪ್ಪಳ: ಜಿಲ್ಲೆಯಲ್ಲಿಂದು 202 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿ ಸೋಂಕಿತರ ಸಂಖ್ಯೆ 6,453ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ 7 ಮಂದಿ ಮೃತಪಟ್ಟಿದ್ದಾರೆ.

ಗಂಗಾವತಿ ತಾಲೂಕು- 57, ಕೊಪ್ಪಳ- 88, ಕುಷ್ಟಗಿ- 27 ಹಾಗೂ ಯಲಬುರ್ಗಾ ತಾಲೂಕಿನಲ್ಲಿ 30 ಸೋಂಕು ಪ್ರಕರಣಗಳು ಪತ್ತೆಯಾಗಿವೆ. ಏಳು ಮಂದಿ ಸೋಂಕಿತರು ಸಾವನ್ನಪ್ಪುವ ಮೂಲಕ ಮೃತರ ಸಂಖ್ಯೆ 147ಕ್ಕೆ ತಲುಪಿದೆ.

ಇಂದು 192 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಈವರೆಗೆ ಒಟ್ಟು 4,687 ಸೋಂಕಿತರು ಸಂಪೂರ್ಣ ಗುಣಮುಖರಾಗಿದ್ದಾರೆ. 1,358 ಸೋಂಕಿತರನ್ನು ಹೋಂ ಐಸೊಲೇಷನ್‌ ಮಾಡಲಾಗಿದೆ. ಇನ್ನುಳಿದ ಪ್ರಕರಣಗಳಿಗೆ ನಿಗದಿತ ಕೋವಿಡ್-19 ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ.

ABOUT THE AUTHOR

...view details