ಕರ್ನಾಟಕ

karnataka

ETV Bharat / state

ಕೊಪ್ಪಳದಲ್ಲಿಂದು 76 ಪಾಸಿಟಿವ್ ಪ್ರಕರಣಗಳು ಪತ್ತೆ: ಸೋಂಕಿತರ ಸಂಖ್ಯೆ 11,820ಕ್ಕೆ ಏರಿಕೆ - ಕೊಪ್ಪಳದಲ್ಲಿ ಕೊರೊನಾ ಕೇಸಸ್​

ಕೊಪ್ಪಳ ಜಿಲ್ಲೆಯಲ್ಲಿ ಇಂದು 76 ಕೋವಿಡ್​ ಪಾಸಿಟಿವ್​​ ಪ್ರಕರಣಗಳು ಪತ್ತೆಯಾಗಿದ್ದು, 28 ಜನರು ಗುಣರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.

File Photo
ಸಂಗ್ರಹ ಚಿತ್ರ

By

Published : Oct 1, 2020, 7:57 PM IST

ಕೊಪ್ಪಳ: ಜಿಲ್ಲೆಯಾದ್ಯಂತ ಇಂದು 76 ನೂತನ ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗುವ ಮೂಲಕ ಸೋಂಕಿತರ ಸಂಖ್ಯೆ 11,820ಕ್ಕೆ ಏರಿಕೆಯಾಗಿದೆ.

ಈ ಕುರಿತು ಮಾಹಿತಿ ನೀಡಿರುವ ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್, ಗಂಗಾವತಿ ತಾಲೂಕಿನಲ್ಲಿ 28, ಕೊಪ್ಪಳದಲ್ಲಿ 25, ಕುಷ್ಟಗಿ 13 ಹಾಗೂ ಯಲಬುರ್ಗಾ ತಾಲೂಕಿನಲ್ಲಿ 10 ಪ್ರಕರಣ ಸೇರಿ ಒಟ್ಟು 76 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈವರೆಗೆ 236 ಜನ ಸೋಂಕಿತರು ಜಿಲ್ಲೆಯಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ.

ಕೋವಿಡ್​-19 ಬುಲೆಟಿನ್​

ಇಂದು 28 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗುವ ಮೂಲಕ ಒಟ್ಟು 9752 ಜನರು ಕೊರೊನಾದಿಂದ ಗುಣಮುಖರಾದಂತಾಗಿದೆ. 1677 ಜನ ಸೋಂಕಿತರನ್ನು ಹೋಂ ಐಸೋಲೇಷನ್‌ ಮಾಡಲಾಗಿದ್ದು, ಇನ್ನುಳಿದ ಪ್ರಕರಣಗಳಿಗೆ ನಿಗದಿತ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ABOUT THE AUTHOR

...view details