ಕೊಪ್ಪಳ:ಜಿಲ್ಲೆಯ ಕುಷ್ಟಗಿ ತಾಲೂಕಿನ ಕೇಸೂರು ಗ್ರಾಮದಲ್ಲಿ ಪತ್ತೆಯಾದ ಕೊರೊನಾ ಸೋಂಕಿತ P- 2254 ವ್ಯಕ್ತಿ ಜೊತೆ ದ್ವಿತೀಯ ಸಂಪರ್ಕ ಹೊಂದಿದ್ದವರ ಪೈಕಿ ಜಿಲ್ಲೆಯಲ್ಲಿ ಈವರೆಗೆ ಒಟ್ಟು 79 ಜನರನ್ನು ಪತ್ತೆ ಹಚ್ಚಲಾಗಿದೆ.
ಕೊಪ್ಪಳದಲ್ಲಿ ಸೋಂಕಿತನ ಜೊತೆ ದ್ವಿತೀಯ ಸಂಪರ್ಕ ಹೊಂದಿದ್ದ 79 ಜನರು ಪತ್ತೆ
ಜಿಲ್ಲೆಯಲ್ಲಿ 12 ಜನ ಪ್ರಾಥಮಿಕ ಸಂಪರ್ಕ ಹೊಂದಿದ್ದವರನ್ನು ಪತ್ತೆ ಮಾಡಿ ಕ್ವಾರಂಟೈನ್ ಮಾಡಲಾಗಿತ್ತು. ಈಗ ದ್ವಿತೀಯ ಸಂಪರ್ಕ ಹೊಂದಿರುವ 79 ಜನರನ್ನು ಗುರುತಿಸಿ ಕ್ವಾರಂಟೈನ್ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಪಿ. ಸುನೀಲಕುಮಾರ್ ತಿಳಿಸಿದ್ದಾರೆ.
ಈ ಕುರಿತಂತೆ ಮಾಹಿತಿ ನೀಡಿರುವ ಜಿಲ್ಲಾಧಿಕಾರಿ ಪಿ. ಸುನೀಲಕುಮಾರ್, ಜಿಲ್ಲೆಯಲ್ಲಿ 12 ಮಂದಿ ಪ್ರಾಥಮಿಕ ಸಂಪರ್ಕ ಹೊಂದಿದ್ದವರನ್ನು ಪತ್ತೆ ಮಾಡಿ ಕ್ವಾರಂಟೈನ್ ಮಾಡಲಾಗಿತ್ತು. ಈಗ ದ್ವಿತೀಯ ಸಂಪರ್ಕ ಹೊಂದಿರುವ 79 ಜನರನ್ನು ಗುರುತಿಸಿ ಕ್ವಾರಂಟೈನ್ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಅಲ್ಲದೆ, ಜಿಲ್ಲೆಯಲ್ಲಿ ಈವರೆಗೆ ಒಟ್ಟು 4 ಕೊರೊನಾ ಆ್ಯಕ್ಟಿವ್ ಕೇಸ್ ಇದ್ದು ನಿಗದಿತ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಜಿಲ್ಲೆಯಲ್ಲಿ ಈವರೆಗೆ ಒಟ್ಟು 3764 ಜನರ ಗಂಟಲು ದ್ರವ ಹಾಗೂ ರಕ್ತದ ಮಾದರಿ ಸಂಗ್ರಹಿಸಿ ಲ್ಯಾಬ್ ಗೆ ಕಳಿಸಲಾಗಿದೆ. ಈ ಪೈಕಿ 3576 ಜನರ ವರದಿ ನೆಗಟಿವ್ ಬಂದಿದೆ. ಇನ್ನೂ 184 ಜನರ ಲ್ಯಾಬ್ ವರದಿ ಬರಬೇಕಿದೆ ಎಂದು ಜಿಲ್ಲಾಧಿಕಾರಿ ಪಿ. ಸುನೀಲಕುಮಾರ್ ಮಾಹಿತಿ ನೀಡಿದ್ದಾರೆ.