ಕೊಪ್ಪಳ: ಜಿಲ್ಲೆಯಲ್ಲಿ ನಿನ್ನೆ 526 ಕೊರೊನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಒಟ್ಟು ಎಂಟು ಜನ ಸೋಂಕಿತರು ಸಾವನ್ನಪ್ಪಿದ್ದಾರೆ.
ಸೋಂಕಿತರ ತಾಲೂಕುವಾರು ವಿವರ:
ಕೊಪ್ಪಳ: ಜಿಲ್ಲೆಯಲ್ಲಿ ನಿನ್ನೆ 526 ಕೊರೊನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಒಟ್ಟು ಎಂಟು ಜನ ಸೋಂಕಿತರು ಸಾವನ್ನಪ್ಪಿದ್ದಾರೆ.
ಸೋಂಕಿತರ ತಾಲೂಕುವಾರು ವಿವರ:
ಕೊಪ್ಪಳ ತಾಲೂಕಿನಲ್ಲಿ 182, ಗಂಗಾವತಿ 215, ಕುಷ್ಟಗಿ 73 ಹಾಗೂ ಯಲಬುರ್ಗಾ ತಾಲೂಕಿನ 56 ಪ್ರಕರಣ ಸೇರಿ 526 ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ.
ಜಿಲ್ಲೆಯಲ್ಲಿ ಈವರೆಗೆ ಒಟ್ಟು 25,921 ಸೋಂಕು ಪ್ರಕರಣಗಳು ದೃಢಪಟ್ಟಿವೆ. ನಿನ್ನೆ ಎಂಟು ಜನ ಸೋಂಕಿತರು ಸಾವನ್ನಪ್ಪಿದ್ದು ಈವರೆಗೆ ಒಟ್ಟು 432 ಮಂದಿ ಮಾರಕ ಸೋಂಕಿಗೆ ಪ್ರಾಣ ಕಳೆದುಕೊಂಡಿದ್ದಾರೆ.
ನಿನ್ನೆ ಕೊರೊನಾದಿಂದ 276 ಜನರು ಗುಣಮುಖರಾಗಿದ್ದು, ಈವರೆಗೆ ಒಟ್ಟು 20,907 ಜನರು ಚೇತರಿಸಿಕೊಂಡಿದ್ದಾರೆ. ಜಿಲ್ಲೆಯಲ್ಲಿ 4,582 ಸಕ್ರಿಯ ಪ್ರಕರಣಗಳಿದ್ದು, 3,931 ಸೋಂಕಿತರು ಹೋಂ ಐಸೋಲೇಷನ್ನಲ್ಲಿದ್ದಾರೆ. 651 ಸೋಂಕಿತರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.