ಕೊಪ್ಪಳ:ವಿದ್ಯುತ್ ಸ್ಪರ್ಶಿಸಿ ಬಾಲಕನೊಬ್ಬ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ತಾಲೂಕಿನ ಬಂಡಿಹರ್ಲಾಪುರ ಗ್ರಾಮದಲ್ಲಿ ನಡೆದಿದೆ. ಮೃತನನ್ನು 16 ವರ್ಷದ ಇರ್ಫಾನ್ ಮಹ್ಮದ್ ಬಷೀರ್ ಪಟೇಲ್ ಎಂದು ಗುರುತಿಸಲಾಗಿದೆ.
ಕೊಪ್ಪಳದಲ್ಲಿ ಕ್ರಿಕೆಟ್ ಆಡುವಾಗ ವಿದ್ಯುತ್ ಸ್ಪರ್ಶಿಸಿ ಬಾಲಕ ಸಾವು - Munirabad Police Station
ಟಿಸಿ ಬಳಿ ಬಿದ್ದಿದ್ದ ಬಾಲ್ ತರಲು ಹೋದ ಬಾಲಕನೋರ್ವನಿಗೆ ವಿದ್ಯುತ್ ತಗುಲಿ ಮೃತಪಟ್ಟ ಘಟನೆ ಕೊಪ್ಪಳ ಜಿಲ್ಲೆಯಲ್ಲಿ ನಡೆದಿದೆ. ಬಾಲಕನ ಸಾವಿಗೆ ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.
ಕ್ರಿಕೆಟ್ ಆಡುವಾಗ ವಿದ್ಯುತ್ ಸ್ಪರ್ಶಿಸಿ ಬಾಲಕ ಸಾವು
ಕ್ರಿಕೆಟ್ ಆಡುತ್ತಿದ್ದಾಗ ವಿದ್ಯುತ್ ಟಿಸಿ ಬಳಿ ಬಿದ್ದಿದ್ದ ಬಾಲ್ ತರಲು ಹೋದಾಗ ವಿದ್ಯುತ್ ತಗುಲಿ ಬಾಲಕ ಮೃತಪಟ್ಟಿದ್ದಾನೆ ಎನ್ನಲಾಗುತ್ತಿದೆ. ಗ್ರಾಮದಲ್ಲಿನ 100 ಕೆವಿ ಟಿಸಿ ಕಂಬದ ಜೆ ವೈರ್ ಅನ್ನು ಪಕ್ಕದಲ್ಲಿರುವ ನೀರಿನ ಟ್ಯಾಂಕ್ಗೆ ಕಟ್ಟಲಾಗಿದ್ದು, ಈ ವೈರ್ ಬಾಲಕನಿಗೆ ತಗುಲಿದೆ. ಇದರಿಂದಲೇ ಬಾಲಕ ಮೃತಪಟ್ಟಿದ್ದಾನೆ ಎನ್ನಲಾಗುತ್ತಿದೆ.
ಬಾಲಕನ ಸಾವಿಗೆ ಜೆಸ್ಕಾಂ ನಿರ್ಲಕ್ಷವೇ ಕಾರಣ ಎಂದು ಗ್ರಾಮಸ್ಥರು ಹಾಗೂ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.