ಕರ್ನಾಟಕ

karnataka

ETV Bharat / state

ಕೊಪ್ಪಳದಲ್ಲಿ ಆಕಸ್ಮಿಕ ಅಗ್ನಿ ಅವಘಡ.. ಬೆಂಕಿಗಾಹುತಿಯಾದ 6 ವರ್ಷದ ಬಾಲಕ - koppal accidental fire

ಜಿಲ್ಲೆಯ ಕುಕನೂರು ತಾಲೂಕಿನ ಕೋಮುಲಾಪುರದಲ್ಲಿ ಆಕಸ್ಮಿಕ ಬೆಂಕಿ ಅನಾಹುತಕ್ಕೆ 6 ವರ್ಷದ ಮಗು ಬಲಿಯಾಗಿದ್ದು, ಸುಮಾರು 1 ಲಕ್ಷಕ್ಕೂ ಅಧಿಕ ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿವೆ.

accidental fire
ಅಗ್ನಿ ಅವಘಡ

By

Published : Aug 24, 2022, 12:35 PM IST

ಕೊಪ್ಪಳ: ಆಕಸ್ಮಿಕ ಬೆಂಕಿ ಅನಾಹುತಕ್ಕೆ 6 ವರ್ಷದ ಬಾಲಕ ಬಲಿಯಾದ ಘಟನೆ ಜಿಲ್ಲೆಯ ಕುಕನೂರು ತಾಲೂಕಿನ ಕೋಮುಲಾಪುರದಲ್ಲಿ ನಡೆದಿದೆ. ಜಯರಾಜ್ ಬೆಂಕಿಗಾಹುತಿಯಾದ ಬಾಲಕ.

ಹನುಮಪ್ಪ ಅಬ್ಬಿಗೇರಿ ಎಂಬುವರಿಗೆ ಸೇರಿದ ಮನೆಯಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಸಂಭವಿಸಿದ್ದು, ದಿಢೀರ್ ಬೆಂಕಿ ಹೊತ್ತಿಕೊಂಡಿದೆ. ಘಟನೆಯಲ್ಲಿ ವಿನೋದ ರಾಜ್ ಹಾಗೂ ಶಂಕರರಾಜ್ ಎಂಬುವರಿಗೆ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ಕೊಪ್ಪಳ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಕೊಪ್ಪಳದಲ್ಲಿ ಆಕಸ್ಮಿಕ ಅಗ್ನಿ ಅವಘಡ

ಇದನ್ನೂ ಓದಿ:ಬೆಂಕಿ ಅನಾಹುತಕ್ಕೆ ಕಾರಣವಾದ ಫೀಸ್ ಗಲಾಟೆ: ಮೂವರಿಗೆ ಗಾಯ

ಆಕಸ್ಮಿಕ ಅಗ್ನಿ ಅವಘಡದಿಂದ ಸುಮಾರು 1 ಲಕ್ಷಕ್ಕೂ ಅಧಿಕ ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿವೆ. ಅಗ್ನಿ ಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಕುಕನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.

ಇದನ್ನೂ ಓದಿ:ಕೊಟ್ಟ ಹಣ ಮರಳಿ ಕೇಳಿದ್ದಕ್ಕೆ ಮಹಿಳೆಗೆ ಬೆಂಕಿ ಹಚ್ಚಿ ಕೊಂದ ದುರುಳರು

ABOUT THE AUTHOR

...view details