ಕೊಪ್ಪಳ: ತಾಲೂಕಿನ ಗ್ರಾಮವೊಂದರಲ್ಲಿ ಅಪ್ರಾಪ್ತೆ ಮೇಲೆ ಅತ್ಯಾಚಾರ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಈ ಕುರಿತು ನಿನ್ನೆ ಆರೋಪಿಯನ್ನು ಬಂಧಿಸಿರುವ ಪೊಲೀಸರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ ಎಂದು ಎಎಸ್ಐ ಡಿ ಕೆ ನಾಯಕ್ ತಿಳಿಸಿದ್ದಾರೆ.
ಕಳೆದ ಆರು ತಿಂಗಳ ಹಿಂದೆ ಮನೆಯಲ್ಲಿ ಯಾರೂ ಇಲ್ಲದ ವೇಳೆ ಬಾಲಕಿಯನ್ನ ಮರುಳುಮಾಡಿ ಅತ್ಯಾಚಾರ ಎಸಗಿದ್ದಾನೆ. ಜೊತೆಗೆ ಅತ್ಯಾಚಾರ ಮಾಡಿರುವುದನ್ನು ವಿಡಿಯೋ ಮಾಡಿಟ್ಟುಕೊಂಡಿದ್ದು, ಈ ಕುರಿತು ಯಾರಿಗಾದರೂ ತಿಳಿಸಿದರೆ ವಿಡಿಯೋ ವೈರಲ್ ಮಾಡುವುದಾಗಿ ಬೆದರಿಕೆ ಒಡ್ಡಿದ್ದಾನೆ. ಹೀಗಾಗಿ, ಬಾಲಕಿ ಈ ಕುರಿತು ಪೋಷಕರಿಗೆ ವಿಷಯ ತಿಳಿಸಿಲ್ಲ.