ಕೊಪ್ಪಳ: ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ ಮತ್ತೊಂದು ಬಲಿಯಾಗಿದ್ದು, ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಾವಿನ ಸಂಖ್ಯೆ 10ಕ್ಕೆ ಏರಿದೆ.
ಕೊಪ್ಪಳದಲ್ಲಿ ಕೊರೊನಾಗೆ ಮತ್ತೊಂದು ಬಲಿ... ಸಾವಿನ ಸಂಖ್ಯೆ 10ಕ್ಕೆ ಏರಿಕೆ - ಕೊಪ್ಪಳದಲ್ಲಿ ಕೊರೊನಾ ಸೋಂಕಿತ ಸಾವು,
ಕೊಪ್ಪಳ ಜಿಲ್ಲೆಯಲ್ಲಿ ಕೊರೊನಾ ಸೋಂಕಿತ ವ್ಯಕ್ತಿಯೊಬ್ಬ ಸಾವನ್ನಪ್ಪಿದ್ದಾರೆ. ಈ ಮೂಲಕ ಕೊರೊನಾ ಸೋಂಕಿತರ ಸಾವಿನ ಸಂಖ್ಯೆ 10ಕ್ಕೆ ಏರಿದೆ.
![ಕೊಪ್ಪಳದಲ್ಲಿ ಕೊರೊನಾಗೆ ಮತ್ತೊಂದು ಬಲಿ... ಸಾವಿನ ಸಂಖ್ಯೆ 10ಕ್ಕೆ ಏರಿಕೆ man died by corona, man died by corona in Koppal, koppal corona news, ಕೊರೊನಾ ಸೋಂಕಿತ ಸಾವು, ಕೊಪ್ಪಳದಲ್ಲಿ ಕೊರೊನಾ ಸೋಂಕಿತ ಸಾವು, ಕೊಪ್ಪಳ ಕೊರೊನಾ ಸುದ್ದಿ,](https://etvbharatimages.akamaized.net/etvbharat/prod-images/768-512-8071463-534-8071463-1595046254088.jpg)
ಸೋಂಕಿತ ವ್ಯಕ್ತಿ ಸಾವು
ಜಿಲ್ಲೆಯ ಕಾರಟಗಿ ಪಟ್ಟಣದ 53 ವರ್ಷದ ಸೋಂಕಿತನೊಬ್ಬ ಸಾವನ್ನಪ್ಪಿದ್ದಾನೆ. ಜುಲೈ 12ರಂದು ಕೊಪ್ಪಳದ ಕೊವೀಡ್-19 ಆಸ್ಪತ್ರೆಗೆ ದಾಖಲಾಗಿದ್ದರು.
ಸಕ್ಕರೆ ಕಾಯಿಲೆ, ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಸೋಂಕಿತ ವ್ಯಕ್ತಿ ನಿನ್ನೆ ರಾತ್ರಿ ಸಾವನ್ನಪ್ಪಿದ್ದಾನೆ ಎಂದು ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಾಳ್ಕರ್ ಮಾಹಿತಿ ನೀಡಿದ್ದಾರೆ.