ಕರ್ನಾಟಕ

karnataka

ETV Bharat / state

ಅನುಮಾನಾಸ್ಪದವಾಗಿ ವ್ಯಕ್ತಿ ಸಾವು: ಅಧಿಕಾರಿಗಳ ವಿರುದ್ಧ ಸ್ಥಳೀಯರು ಗರಂ - Channabasava Tatana Matt

ಚನ್ನಬಸವ ತಾತನ ಮಠದ ಮುಂಭಾಗ ಇರುವ ವಾಣಿಜ್ಯ ಸಂಕೀರ್ಣದ ಬಳಿ ಅನುಮಾನಾಸ್ಪದ ರೀತಿಯಲ್ಲಿ ವ್ಯಕ್ತಿಯೊಬ್ಬ ಸಾವನ್ನಪ್ಪಿರುವ ಘಟನೆ ನಡೆದಿದೆ.

ಅನುಮಾನಸ್ಪದವಾಗಿ ವ್ಯಕ್ತಿ ಸಾವು
ಅನುಮಾನಸ್ಪದವಾಗಿ ವ್ಯಕ್ತಿ ಸಾವು

By

Published : Jul 7, 2020, 7:56 AM IST

ಗಂಗಾವತಿ (ಕೊಪ್ಪಳ):ವ್ಯಕ್ತಿಯೊಬ್ಬ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ ಘಟನೆ ನಗರದ ಚನ್ನಬಸವ ತಾತನ ಮಠದ ಮುಂಭಾಗ ಇರುವ ವಾಣಿಜ್ಯ ಸಂಕೀರ್ಣದ ಬಳಿ ನಡೆದಿದೆ.

ಸಂಕೀರ್ಣದ ಮುಂದೆ ರಕ್ತ ವಾಂತಿ ಮಾಡಿ, ಮಲಗಿದ ಸ್ಥಿತಿಯಲ್ಲಿ ಈತನ ಮೃತದೇಹ ಪತ್ತೆಯಾಗಿದೆ. ಸದ್ಯ ಮೃತ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ. ಇನ್ನು ಮೃತದೇಹದ ಬಳಿ ಬ್ಯಾಗ್​ ಹಾಗೂ ಕೆಲ ಇತರ ಸಾಮಗ್ರಿಗಳು ದೊರೆತಿವೆ.

ಈ ಘಟನೆ ನಡೆದು ಸಾಕಷ್ಟು ಸಮಯ ಕಳೆದರೂ ಪೊಲೀಸರು, ನಗರಸಭೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿಲ್ಲ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ABOUT THE AUTHOR

...view details