ಕೊಪ್ಪಳ:ಸಮಾಜದ ಕಟ್ಟಕಡೆಯ ವ್ಯಕ್ತಿಗೆ ಆರೋಗ್ಯ ಸೇವೆ ಕೈಗೆಟಕುವ ದರದಲ್ಲಿ ದೊರಕಬೇಕೆನ್ನುವ ಉದ್ದೇಶದಿಂದ ಆರಂಭವಾದ ಪ್ರಧಾನಮಂತ್ರಿ ಜನರಿಕ್ ಔಷಧ ವಲಯ ಕೊರೊನಾ ಸಂದರ್ಭದಲ್ಲಿ ಬಡ ಮತ್ತು ಮಧ್ಯಮ ವರ್ಗದ ಜನರ ಪಾಲಿಗೆ ವರವಾಗಿದೆ.
ಜಿಲ್ಲೆಯಲ್ಲಿ ಪ್ರಧಾನ ಮಂತ್ರಿ ಜನೌಷಧ ಮಳಿಗೆಗಳಿ ಕಾರ್ಯ ನಿರ್ವಹಿಸುತ್ತಿದ್ದು, ಸಾರ್ವಜನಿಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ಜನೌಷಧ ಕೇಂದ್ರಗಳಲ್ಲಿ ಕಡಿಮೆ ದರಕ್ಕೆ ಔಷಧ ದೊರೆಯುವ ಕುರಿತು ಮಾಹಿತಿ ಇರಲಿಲ್ಲ. ನಂತರ ಜನರಿಕ್ ಔಷಧ ಬಗ್ಗೆ ಜನರಿಗೆ ಹೆಚ್ಚು ತಿಳಿವಳಿಕೆ ಮತ್ತು ನಂಬಿಕೆ ಬಂದಿದ್ದರಿಂದ ಜನ ಜನರಿಕ್ ಔಷಧವನ್ನೇ ಕೊಂಡುಕೊಳ್ಳುತ್ತಿದ್ದಾರೆ.
ಇದನ್ನೂ ಓದಿ...2 ವಾಹನಗಳ ನಡುವೆ ಮುಖಾಮುಖಿ ಡಿಕ್ಕಿ: 8 ಜನ ಕೂಲಿ ಕಾರ್ಮಿಕರಿಗೆ ಗಾಯ
ನಗರದ ಜಿಲ್ಲಾಸ್ಪತ್ರೆ, ಬಸ್ ನಿಲ್ದಾಣದ ಬಳಿ, ಗಂಗಾವತಿ ತಾಲೂಕು ಆಸ್ಪತ್ರೆಯಲ್ಲಿ ತಲಾ ಒಂದು ಮತ್ತು ಕುಷ್ಟಗಿ ತಾಲೂಕು ಆಸ್ಪತ್ರೆಯಲ್ಲಿ ಒಂದು ಹಾಗೂ ಪಟ್ಟಣದಲ್ಲಿ ಒಂದು, ಕಾರಟಗಿ ಪಟ್ಟಣದಲ್ಲಿ ಎರಡು, ಯಲಬುರ್ಗಾ ತಾಲೂಕು ಆಸ್ಪತ್ರೆಯಲ್ಲಿ ಒಂದು ಜನೌಷಧ ಕೇಂದ್ರ ಕಾರ್ಯ ನಿರ್ವಹಿಸುತ್ತಿದೆ.
ಲಾಕ್ಡೌನ್ ಸಂದರ್ಭದಲ್ಲಿ ಜನೌಷಧ ಕೇಂದ್ರಗಳಿಂದ ಸಾರ್ವಜನಿಕರಿಗೆ ಸಾಕಷ್ಟು ಅನುಕೂಲವಾಗಿವೆ. ಜಿಲ್ಲೆಯಲ್ಲಿ ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಈ ಕೇಂದ್ರಗಳನ್ನು ತೆರೆಯಲು ಚಿಂತನೆ ಇದೆ ಎನ್ನುತ್ತಾರೆ ಕೊಪ್ಪಳದ ಸಹಾಯಕ ಔಷಧ ನಿಯಂತ್ರಣಾಧಿಕಾರಿ ಜಿ.ಪಿ.ರವಿಪ್ರಸಾದ್.
ಜನೌಷಧ ಕೇಂದ್ರದ ಕುರಿತು ಅಭಿಪ್ರಾಯ ಜನೌಷಧ ಕೇಂದ್ರಗಳು ಪ್ರಾರಂಭವಾದಾಗಿನಿಂದ ಸಾಮಾನ್ಯ ಜನರಿಗೆ ಸಾಕಷ್ಟು ಅನುಕೂಲವಾಗಿದೆ. ಸಾವಿರಾರು ರೂಪಾಯಿ ಖರ್ಚಾಗುವ ಔಷಧಗಳಿಗೆ ಈ ಜನೌಷಧ ಕೇಂದ್ರಗಳಲ್ಲಿ ಅತಿ ಕಡಿಮೆ ದರಕ್ಕೆ ದೊರೆಯುತ್ತಿವೆ. ಇದರಿಂದಾಗಿ ಬಡ ರೋಗಿಗಳಿಗೆ ಆರ್ಥಿಕ ಹೊರೆ ತಪ್ಪುತ್ತಿದೆ. ಅಲ್ಲದೇ, ಇನ್ನಷ್ಟು ಕೇಂದ್ರಗಳನ್ನು ತೆರೆಯಬೇಕು ಎಂದು ಒತ್ತಾಯಿಸುತ್ತಿದ್ದಾರೆ ಸಾರ್ವಜನಿಕರು.