ಕೊಪ್ಪಳ: ಇಂದು ಕೊಪ್ಪಳದ ಕೋವಿಡ್-19 ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮತ್ತೊಬ್ಬ ಮಹಿಳೆ ಗುಣಮುಖರಾಗಿದ್ದು, ಆರೋಗ್ಯ ಇಲಾಖೆ ಹಾಗೂ ಜಿಲ್ಲಾ ಆಸ್ಪತ್ರೆಯ ಸಿಬ್ಬಂದಿ ಚಪ್ಪಾಳೆ ತಟ್ಟಿ ಮಹಿಳೆಯನ್ನು ಆಸ್ಪತ್ರೆಯಿಂದ ಬೀಳ್ಕೊಟ್ಟರು.
ಕೊಪ್ಪಳ: ಕೋವಿಡ್ ಸೋಂಕಿನಿಂದ ಮತ್ತೊಬ್ಬ ಮಹಿಳೆ ಗುಣಮುಖ - ಕೊಪ್ಪಳದಲ್ಲಿ ಗುಣಮುಖರಾದ ಕೊರೊನಾ ಸೋಂಕಿತರು
ಕೊಪ್ಪಳದ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮತ್ತೊಬ್ಬ ಮಹಿಳೆ ಗುಣಮುಖರಾಗಿದ್ದು, ಆರೋಗ್ಯ ಇಲಾಖೆ ಹಾಗೂ ಜಿಲ್ಲಾ ಆಸ್ಪತ್ರೆಯ ಸಿಬ್ಬಂದಿ ಚಪ್ಪಾಳೆ ತಟ್ಟಿ ಮಹಿಳೆಯನ್ನು ಆಸ್ಪತ್ರೆಯಿಂದ ಬೀಳ್ಕೊಟ್ಟರು.
ರೋಗಿ ಸಂಖ್ಯೆ 5834 ಮಹಿಳೆಗೆ ಕೊರೊನಾ ಸೋಂಕು ತಗುಲಿದ ಹಿನ್ನೆಲೆಯಲ್ಲಿ ಇಲ್ಲಿನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಈ ವೇಳೆ ಅವರ ಗಂಟಲು ದ್ರವವನ್ನು ಮತ್ತೆ ಪರೀಕ್ಷೆ ಮಾಡಿದಾಗ ನೆಗೆಟಿವ್ ವರದಿ ಬಂದಿದೆ. ಈ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಯಿಂದ ಇಂದು ಬಿಡುಗಡೆ ಮಾಡಲಾಯಿತು ಎಂದು ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎಸ್.ಬಿ. ದಾನರೆಡ್ಡಿ ತಿಳಿಸಿದರು.
ಕೊಪ್ಪಳ ಜಿಲ್ಲೆಯಲ್ಲಿ ಈವರೆಗೆ ಒಟ್ಟು 13 ಜನ ಸೋಂಕಿತರಲ್ಲಿ ಈವರೆಗೆ ಒಟ್ಟು 9 ಜನರು ಕೊರೊನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇನ್ನುಳಿದಂತೆ ನಾಲ್ವರು ಸೋಂಕಿತರಿಗೆ ಕೊಪ್ಪಳದ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.