ಕೊಪ್ಪಳ :ಪರವಾನಿಗೆ ಪಡೆಯದೆ ಜನವಸತಿ ಪ್ರದೇಶದಲ್ಲಿ ಖಾಸಗಿ ಕಂಪನಿಯೊಂದು ಮೊಬೈಲ್ ಟವರ್‌ನ ಏಕಾಏಕಿ ನಿರ್ಮಾಣ ಮಾಡಿರುವ ಆರೋಪ ಕೇಳಿ ಬಂದಿದೆ.
ಪರವಾನಿಗೆ ಇಲ್ಲದೇ ತಲೆಎತ್ತಿದ ಮೊಬೈಲ್ ಟವರ್.. ಜನರ ಆರೋಗ್ಯದ ಬಗ್ಗೆ ಡೋಂಟ್‌ಕೇರ್! - Kannada news
ಜನವಸತಿ ಪ್ರದೇಶದಲ್ಲಿ ಮೊಬೈಲ್ ಟವರ್ ಅಳವಡಿಸಬಾರದು. ಇದರಿಂದ ನಮ್ಮ ಆರೋಗ್ಯಕ್ಕೆ ತೊಂದರೆಯಾಗಲಿದೆ. ಅದನ್ನು ಜನವಸತಿ ಪ್ರದೇಶದಿಂದ ಸ್ಥಳಾಂತರಿಸಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.
ಜಿಲ್ಲೆಯ ಗಂಗಾವತಿ ತಾಲೂಕಿನ ಶರಣಬಸವೇಶ್ವರ ಕ್ಯಾಂಪ್‌ನ ಆಶ್ರಯ ಕಾಲೋನಿಯಲ್ಲಿ ಅಕ್ರಮವಾಗಿ ಪರವಾನಿಗೆ ಪಡೆಯದೆ ಮೊಬೈಲ್ ಟವರ್ ನಿರ್ಮಿಸಲಾಗಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಇಲ್ಲಿ ವಾಸಿಸುವ ಜನರು ಬಹುತೇಕರು ಕೂಲಿ ಕಾರ್ಮಿಕರಾಗಿದ್ದಾರೆ. ಮೊಬೈಲ್ ಟವರ್‌ನಿಂದ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ. ಜನವಸತಿ ಪ್ರದೇಶದಲ್ಲಿ ಮೊಬೈಲ್ ಟವರ್ ಅಳವಡಿಸಬಾರದು. ಇದರಿಂದ ಜನರ ಆರೋಗ್ಯಕ್ಕೆ ತೊಂದರೆಯಾಗಲಿದೆ. ಹೀಗಾಗಿ ಸಂಬಂಧಿಸಿದ ಅಧಿಕಾರಿಗಳು ಮೊಬೈಲ್ ಟವರ್ ಅಳವಡಿಸಿದ ಕಂಪನಿಯ ಮೇಲೆ ಕ್ರಮಕೈಗೊಳ್ಳಬೇಕು ಮತ್ತು ಅದನ್ನು ಜನವಸತಿ ಪ್ರದೇಶದಿಂದ ಸ್ಥಳಾಂತರಿಸಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.