ಕೊಪ್ಪಳ : ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿ ರೂಪಾ ಸಿ. ಹೆಚ್ ದಾಖಲೆ ಇಲ್ಲದೆ 3.20 ಲಕ್ಷ ರೂ. ಹಣ ಸಾಗಣೆ ಮಾಡುವಾಗ ಎಸಿಬಿ ಬಲೆಗೆ ಬಿದ್ದಿದ್ದಾರೆ.
ಅಕ್ರಮ ಹಣ ವರ್ಗಾವಣೆ : ಎಸಿಬಿ ಬಲೆಗೆ ಬಿದ್ದ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿ! - latest koppal news
ತಾಲೂಕಿನ ಹಿಟ್ನಾಳ್ ಟೋಲ್ ಗೇಟ್ ಬಳಿ ಎಸಿಬಿ ಅಧಿಕಾರಿಗಳು ಟ್ರ್ಯಾಪ್ ಮಾಡಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಯನ್ನು ವಶಕ್ಕೆ ಪಡೆದಿದ್ದಾರೆ.
ಎಸಿಬಿ ಬಲೆಗೆ ಬಿದ್ದ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿ
ತಾಲೂಕಿನ ಹಿಟ್ನಾಳ್ ಟೋಲ್ ಗೇಟ್ ಬಳಿ ಎಸಿಬಿ ಅಧಿಕಾರಿಗಳು ಟ್ರ್ಯಾಪ್ ಮಾಡಿ ವಶಕ್ಕೆ ಪಡೆದಿದ್ದಾರೆ. ಎಸಿಬಿ ಡಿವೈಎಸ್ಪಿ ಆರ್. ಎಸ್. ಉಜ್ಜಿನಕೊಪ್ಪ ನೇತೃತ್ವದಲ್ಲಿ ಈ ದಾಳಿ ನಡೆಸಲಾಗಿದೆ.
ಮಹಿಳಾ ಅಧಿಕಾರಿ KA-35-P-0225 ನಂಬರ್ನ ಕಾರಿನಲ್ಲಿ 3.20 ಲಕ್ಷ ರೂಪಾಯಿ ಹಣವನ್ನು ದಾಖಲೆ ಇಲ್ಲದೆ ಸಾಗಿಸುತ್ತಿದ್ದಾಗ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದಾಳಿ ಸಂದರ್ಭದಲ್ಲಿ ಎಸಿಬಿ ಇನ್ಸ್ಪೆಕ್ಟರ್ಗಳಾದ ಎಸ್. ಎಸ್. ಬೀಳಗಿ, ಗುರುರಾಜ ಎನ್. ಎಂ ಉಪಸ್ಥಿತರಿದ್ದರು.