ಕೊಪ್ಪಳ: ಬೈಕ್ ಹಾಗೂ ಬಸ್ ನಡುವೆ ಡಿಕ್ಕಿಯಾಗಿ ಬೈಕ್ ಸವಾರರಿಬ್ಬರು ಮೃತಪಟ್ಟಿರುವ ಘಟನೆ ಘಟನೆ ತಾಲೂಕಿನ ಗುಳದಳ್ಳಿ ಗ್ರಾಮದ ಬಳಿ ನಡೆದಿದೆ.
ಬೈಕ್ - ಬಸ್ ನಡುವೆ ಡಿಕ್ಕಿ: ಕೊಪ್ಪಳದಲ್ಲಿ ಇಬ್ಬರ ದುರ್ಮರಣ - Accident in Koppal
ಬೈಕ್ ಹಾಗೂ ಬಸ್ ನಡುವೆ ಡಿಕ್ಕಿಯಾಗಿ ಬೈಕ್ ಇಬ್ಬರು ಮೃತಪಟ್ಟಿರುವ ಘಟನೆ ಕೊಪ್ಪಳ ಜಿಲ್ಲೆಯ ಮುನಿರಾಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಕೊಪ್ಪಳದಲ್ಲಿ ಇಬ್ಬರ ದುರ್ಮರಣ
ಹೊಸಪೇಟೆ ಮೂಲದ ವಸಂತ್ ಹಾಗೂ ವಿಜಯಕುಮಾರ ಮೃತ ದುರ್ದೈವಿಗಳು. ಇವರು ಗಿಣಗೇರಿಯಿಂದ ಗುಳದಳ್ಳಿ ಮಾರ್ಗವಾಗಿ ಹೊಸಪೇಟೆಗೆ ತೆರಳುತ್ತಿದ್ದಾಗ ಗಂಗಾವತಿಯಿಂದ ಬರುತ್ತಿದ್ದ ಸಾರಿಗೆ ಸಂಸ್ಥೆಯ ಬಸ್ ಡಿಕ್ಕಿ ಹೊಡೆದಿದೆ.
ಪರಿಣಾಮ ಬೈಕ್ ಸವಾರರು ತೀವ್ರ ರಕ್ತ ಸ್ರಾವದಿಂದ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಈ ಸಂಬಂಧ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.