ಕುಷ್ಟಗಿ : ಕುಷ್ಟಗಿ ಹಾಗೂ ತಾವರಗೇರಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಹಗಲು ಮತ್ತು ರಾತ್ರಿ ಹೊತ್ತು ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದ ನಾಲ್ವರು ಆರೋಪಿಗಳನ್ನು ಕುಷ್ಟಗಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 19 ಲಕ್ಷ ರೂಪಾಯಿ ಮೌಲ್ಯದ ಚಿನ್ನ, ಬೆಳ್ಳಿ ಹಾಗೂ ಕಳ್ಳತನಕ್ಕೆ ಬಳಸಿದ್ದ ಕಾರು ಜಪ್ತಿ ಮಾಡಿದ್ದಾರೆ.
ಬೀಗ ಹಾಕಿದ ಮನೆಗಳ ಕಳ್ಳತನ ಮಾಡುವುದರಲ್ಲಿ ಸ್ಪೆಷಲಿಸ್ಟ್ ಆಗಿದ್ದ ಐನಾತಿ ಕಳ್ಳರು ಮನೆಯಲ್ಲಿ ಚಿನ್ನಾಭರಣ, ಹಣ ಸಿಗಲಿ ಬಿಡಲಿ ಬಾಗಲು ಬೀಗ ಮುರಿದು ಒಳನುಗ್ಗುತ್ತಿದ್ದರು. ಕುಷ್ಟಗಿ ಪೊಲೀಸ್ ಠಾಣೆಯ ಹಿಂಭಾಗ ಮಾಜಿ ಸೈನಿಕ, ಮಡಿವಾಳ ಸಮಾಜದ ಅಧ್ಯಕ್ಷ ಸುಭಾಷ್ ಮಡಿವಾಳರ ಅವರ ಮನೆ, ಚಂದ್ರಶೇಖರ್ ಲೇಔಟ್ನ ನರ್ಸ್ ಮನೆ, ಕಾರ್ಗಿಲ್ ವೃತ್ತದಲ್ಲಿ ರಸ್ತೆ ಸಾರಿಗೆ ಸಂಸ್ಥೆಯ ಬಸ್ ನಿರ್ವಾಹಕನ ಮನೆ ಹಾಗೂ ವಣಗೇರಾ ಸೇರಿದಂತೆ ತಾವರಗೇರಾ ಪಟ್ಟಣದಲ್ಲಿ ಮನೆ ಕಳವು ಮಾಡಿದ್ದನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ.
ಇದನ್ನೂ ಓದಿ:ಎಸ್ಸಿ, ಎಸ್ಟಿ ಮೀಸಲಾತಿ ಹೆಚ್ಚಳ ಪ್ರಶ್ನಿಸಿದ್ದ ಅರ್ಜಿ: ಸರ್ಕಾರಕ್ಕೆ ನೋಟಿಸ್ ಕೊಟ್ಟ ಹೈಕೋರ್ಟ್