ಕುಷ್ಟಗಿ(ಕೊಪ್ಪಳ):ತಾಲೂಕಿನ ಲಿಂಗದಹಳ್ಳಿ ಗ್ರಾಮದಲ್ಲಿ ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ಕೃಷಿ ಬದು ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಲಾಗಿದೆ.
ಲಿಂಗದಳ್ಳಿ ಗ್ರಾಮದಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ಕೃಷಿ ಬದು ನಿರ್ಮಾಣಕ್ಕೆ ಚಾಲನೆ - ಉದ್ಯೋಗ ಖಾತ್ರಿ ಯೋಜನೆ
ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಲಿಂಗದಹಳ್ಳಿ ಗ್ರಾಮದಲ್ಲಿ ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ಕೃಷಿ ಬದು ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಲಾಗಿದ್ದು, ಕಡ್ಡಾಯವಾಗಿ ಮಾಸ್ಕ್ ಮತ್ತು ಸಾಮಾಜಿಕ ಅಂತರ ಕಾಯ್ದುಕೊಂಡು ಕೆಲಸ ನಿರ್ವಹಿಸುವಂತೆ ಸೂಚಿಸಲಾಗಿದೆ.
ಲಿಂಗದಳ್ಳಿ ಗ್ರಾಮದಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ಕೃಷಿ ಬದು ನಿರ್ಮಾಣಕ್ಕೆ ಚಾಲನೆ
ಗ್ರಾಮದ ರೈತರ ಜಮೀನಿನಲ್ಲಿ ಕೂಲಿ ಕಾರ್ಮಿಕರಿಗೆ ಕೊರೊನಾ ವೈರಸ್ ಹಿನ್ನೆಲೆ ಕಡ್ಡಾಯವಾಗಿ ಮಾಸ್ಕ್ ಮತ್ತು ಸಾಮಾಜಿಕ ಅಂತರ ಕಾಯ್ದುಕೊಂಡು ಕೆಲಸ ನಿರ್ವಹಿಸುವ ಬಗ್ಗೆ ಗ್ರಾಪಂ ಅಭಿವೃದ್ಧಿ ಅಧಿಕಾರಿ ಮಲ್ಲಿಕಾರ್ಜುನ್ ಮಳಿಮಠ ಜಾಗೃತಿ ಮೂಡಿಸಿದರು. ಅಲ್ಲದೆ ಬದು ನಿರ್ಮಾಣ ಕಾಮಗಾರಿ ನಡೆದ ಸ್ಥಳದಲ್ಲಿ ಕೂಲಿ ಕಾರ್ಮಿಕರಿಗೆ ಲಾಕ್ಡೌನ್ ನಿಯಮ ಪಾಲಿಸುವ ಪ್ರತಿಜ್ಞಾವಿಧಿ ಬೋಧಿಸಿದರು.