ಕೊಪ್ಪಳ/ಗಂಗಾವತಿ :ಏಡ್ಸ್ ದಿನಾಚರಣೆ ಅಂಗವಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಾಯೋಜಕತ್ವದಲ್ಲಿ ನಗರದ ವಿವಿಧ ಸಂಘ, ಸಂಸ್ಥೆಗಳ ಜಂಟಿ ಆಶ್ರಯದಲ್ಲಿ ಜಾಗೃತಿ ಜಾಥಾ ನಡೆಯಿತು.
ಏಡ್ಸ್ ದಿನಾಚರಣೆ ಕಾರ್ಯಕ್ರಮದಲ್ಲಿ ಗಂಗಾವತಿ ಪ್ರಾಣೇಶ್ 'ಪಂಚ್' ಜಾಗೃತಿ - ಕೊಪ್ಪಳ ಜಿಲ್ಲಾಧಿಕಾರಿ ಸುನಿಲ್ ಕುಮಾರ ಹೇಳಿಕೆ
ಏಡ್ಸ್ ದಿನಾಚರಣೆ ಅಂಗವಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಾಯೋಜಕತ್ವದಲ್ಲಿ ನಗರದ ವಿವಿಧ ಸಂಘ, ಸಂಸ್ಥೆಗಳ ಜಂಟಿ ಆಶ್ರಯದಲ್ಲಿ ಜಾಗೃತಿ ಜಾಥಾ ನಡೆಯಿತು.
ಈ ವೇಳೆ ಹಾಸ್ಯ ಕಲಾವಿದ ಗಂಗಾವತಿ ಪ್ರಾಣೇಶ್ ಭಾಗವಹಿಸಿ ಮಾತನಾಡಿದರು. ಇಂದಿನ ಶಿಕ್ಷಣದಲ್ಲಿ ಪ್ರೌಢಶಾಲೆ ಹಂತದಿಂದಲೇ ಲೈಂಗಿಕ ಶಿಕ್ಷಣದ ಬಗ್ಗೆ ಅರಿವು ಮೂಡಿಸಬೇಕು. ಲೈಗಿಕತೆ, ಕಾಂಡೋಮ್ ಬಳಕೆ ಹಾಗೂ ಏಡ್ಸ್ ಕುರಿತು ಶಿಕ್ಷಕರು ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವುದರಿಂದ ಭವಿಷ್ಯದಲ್ಲಿ ಏಡ್ಸ್ ತಡೆಗಟ್ಟಲು ನೆರವಾಗಬೇಕು ಎಂದು ನೆರೆದಿದ್ದ ಜನರನ್ನು ನಗಿಸುತ್ತಲೇ ಪ್ರಾಣೇಶ್ ತಮ್ಮ ಹಾಸ್ಯದಾಟಿಯ ಭಾಷಣದಲ್ಲಿ ಜನರಿಗೆ ಏಡ್ಸ್ ಕುರಿತಾಗಿ ಸಂದೇಶವನ್ನು ನೀಡಿದರು.
ಈ ವೇಳೆ ಜಿಲ್ಲಾಧಿಕಾರಿ ಸುನಿಲ್ ಕುಮಾರ, ಶಾಸಕ ಪರಣ್ಣ ಮುನವಳ್ಳಿ, ಜಿಲ್ಲಾ ಪಂಚಾಯತ್ ಅಧ್ಯಕ್ಷ ವಿಶ್ವನಾಥ್ ರೆಡ್ಡಿ, ನ್ಯಾಯಾಧೀಶರಾದ ಆರ್.ಎಂ. ನಧಾಪ್, ಅನಿತಾ, ಗಾಯತ್ರಿ, ಡಿವೈಎಸ್ಪಿ ಚಂದ್ರಶೇಖರ್ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.