ಕುಷ್ಟಗಿ: ಸ್ವಾತಂತ್ರ್ಯ ಪೂರ್ವದಲ್ಲಿ ಭಾರತ ಬಿಟ್ಟು ತೊಲಗಿ ಹೋರಾಟದಂತೆ ಸ್ವಾತಂತ್ರ್ಯ ನಂತರದ ಕಾರ್ಪೋರೇಟ್ ಸಂಸ್ಥೆಗಳು ಕೃಷಿ ಬಿಟ್ಟು ತೊಲಗಲಿ ಎಂದು ಅಖಿಲ ಭಾರತ ರೈತ ಸಂಘರ್ಷ ಸಮಿತಿ ನೇತೃತ್ವದಲ್ಲಿ ರೈತರು ಪ್ರತಿಭಟನೆ ನಡೆಸಿದರು.
ರೈತರಿಂದ ಕಾರ್ಪೋರೇಟ್ ಕಂಪನಿಗಳು ಕೃಷಿ ಬಿಟ್ಟು ತೊಲಗಲಿ ಹೋರಾಟ - Kushtagi
ಕಾರ್ಪೋರೇಟ್ ಸಂಸ್ಥೆಗಳು ಕೃಷಿ ಬಿಟ್ಟು ತೊಲಗಲಿ ಎಂದು ಅಖಿಲ ಭಾರತ ರೈತ ಸಂಘರ್ಷ ಸಮಿತಿ ನೇತೃತ್ವದಲ್ಲಿ ರೈತರು ಪ್ರತಿಭಟನೆ ನಡೆಸಿದರು.
ಇಲ್ಲಿನ ಎಪಿಎಂಸಿಯಲ್ಲಿ ಪ್ರತಿಭಟನೆ ನಡೆಸಿದ ರೈತರು, ಸರ್ಕಾರಕ್ಕೆ ಎಚ್ಚರಿಕೆ ನೀಡಿದರು. ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾಧ್ಯಕ್ಷ ಆರ್.ಕೆ.ದೇಸಾಯಿ ಮಾತನಾಡಿ, ವಿದೇಶಿ ಕಂಪನಿಗಳಿಗೆ ಪೂರಕವಾಗಿ ಭೂ ಸುಧಾರಣಾ ಕಾಯ್ದೆ ತರಲು ಹೊರಟಿರುವ ಹಿನ್ನೆಲೆಯಲ್ಲಿ ಕಾಪೋರೇಟ್ ಕಂಪನಿಗಳು ಕೃಷಿ ಬಿಟ್ಟು ತೊಲಗಿ ಎನ್ನುವ ಹೋರಾಟ ಅನಿವಾರ್ಯವಾಗಿದೆ. ಕಂಪನಿಗಳು ತೊಲಗದೇ ಇದ್ದಲ್ಲಿ ರೈತರಿಗೆ ಉಳಿಗಾಲವಿಲ್ಲ ಎಂದರು.
ರೈತ ಸಂಘದ ಜಿಲ್ಲಾಧ್ಯಕ್ಷ ಮೊಹಮ್ಮದ್ ನಜೀರಸಾಬ್ ಮೂಲಿಮನಿ ಮಾತನಾಡಿ, ಸಿಎಂ ಬಿ.ಎಸ್.ಯಡಿಯೂರಪ್ಪ ನಿಜವಾಗಿಯೂ ರೈತನ ಮಗ ಆಗಿದ್ದರೆ ಭೂ ಸುಧಾರಣಾ ಕಾಯ್ದೆ, ಎಪಿಎಂಸಿ ಕಾಯ್ದೆ ವಾಪಸ್ ಪಡೆಯಬೇಕು ಎಂದರು. ಇದೇ ವೇಳೆ ರೈತರ ವಿವಿಧ ಬೇಡಿಕೆಗಳ ಮನವಿಯನ್ನು ಗ್ರೇಡ್-2 ತಹಶೀಲ್ದಾರ ವಿಜಯಾ ಮುಂಡರಗಿ ಅವರಿಗೆ ಸಲ್ಲಿಸಿದರು.