ಕರ್ನಾಟಕ

karnataka

ETV Bharat / state

ರಸ್ತೆ ಡಾಂಬರೀಕರಣದ ಗುಣಮಟ್ಟದಲ್ಲಿ ರಾಜಿ ಇಲ್ಲ.. ಶಾಸಕ ಅಮರೇಗೌಡ ಪಾಟೀಲ ಬಯ್ಯಾಪೂರ - Kushtagi koppala latest news

ಗುಣಮಟ್ಟದಲ್ಲಿ ವ್ಯತ್ಯಾಸವಾದರೆ ಇಲಾಖೆಯ ಅಧಿಕಾರಿಗಳನ್ನು ಹೊಣೆಗಾರರನ್ನಾಗಿಸಲಾಗುವುದು. ಗುಣಮಟ್ಟದ ಕಾಮಗಾರಿ ವಿಷಯದಲ್ಲಿ ರಾಜಿ ಇಲ್ಲ ಎಂದು ಗುತ್ತಿಗೆದಾರರಿಗೆ ತಾಕೀತು.

Road work
Road work

By

Published : Jun 7, 2020, 9:34 PM IST

ಕುಷ್ಟಗಿ(ಕೊಪ್ಪಳ) : ತಾಲೂಕಿನ ಗಡಿ ಭಾಗದ ನಿಲೋಗಲ್ ಮಿಟ್ಟಲಕೋಡ್ ರಸ್ತೆಯ ಡಾಂಬರೀಕರಣ ಕಾಮಗಾರಿಯನ್ನು ಶಾಸಕ ಅಮರೇಗೌಡ ಪಾಟೀಲ ಬಯ್ಯಾಪೂರ ಇಂದು ಪರಿಶೀಲಿಸಿದರು.

ಕಲ್ಯಾಣ ಕರ್ನಾಟಕ ಪ್ರದೇಶಾಭಿವೃಧ್ಧಿ ಯೋಜನೆಯಡಿ 3 ಕಿ.ಮೀ ಅಂತರದ 60 ಲಕ್ಷ ರೂ. ವೆಚ್ಚದಲ್ಲಿ ಡಾಂಬರೀಕರಣ ಕಾಮಗಾರಿ ನಡೆಯುತ್ತಿದೆ. ಕಾಮಗಾರಿಯನ್ನು ಶಾಸಕರು ಪರಿಶೀಲಿಸಿದರು. ಬಳಿಕ ಗುಣಮಟ್ಟದಲ್ಲಿ ವ್ಯತ್ಯಾಸವಾದರೆ ಇಲಾಖೆಯ ಅಧಿಕಾರಿಗಳನ್ನು ಹೊಣೆಗಾರರನ್ನಾಗಿಸಲಾಗುವುದು ಎಂದು ಎಚ್ಚರಿಸಿದರು. ಗುಣಮಟ್ಟದ ಕಾಮಗಾರಿ ನಿರ್ವಹಿಸಬೇಕು, ಗುಣಮಟ್ಟದ ವಿಷಯದಲ್ಲಿ ರಾಜಿ ಇಲ್ಲ ಎಂದು ಗುತ್ತಿಗೆದಾರರಿಗೆ ತಾಕೀತು ಮಾಡಿದರು.

ಇದೇ ವೇಳೆ ನಿಲೋಗಲ್ ಗ್ರಾಮದ ಅಚನೂರು ಮಲ್ಲಯ್ಯ ದೇವಸ್ಥಾನದ ಬಳಿಯ ಅಚನೂರು ಕೆರೆಯ ತಡೆಗೋಡೆಯನ್ನು ಪರಿಶೀಲಿಸಿದರು. ತಾಪಂ ಕೆ.ತಿಮ್ಮಪ್ಪ, ಪಂಚಾಯತ್ ರಾಜ್ ಇಂಜಿನಿಯರಿಂಗ್ ಉಪ ವಿಭಾಗದ ಜೆಇ ಇಲಿಯಾಸ್ ಮತ್ತಿತರರು ಹಾಜರಿದ್ದರು.

ABOUT THE AUTHOR

...view details