ಕೊಪ್ಪಳ:ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜಯಂತಿಯನ್ನು ನಗರದಲ್ಲಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಸರಳವಾಗಿ ಆಚರಿಸಲಾಯಿತು.
ಕೊಪ್ಪಳದಲ್ಲಿ ಜಿಲ್ಲಾ ಕಾಂಗ್ರೆಸ್ನಿಂದ ಅಂಬೇಡ್ಕರ್ ಜಯಂತಿ ಆಚರಣೆ - Former District Panchayat President Rajasekhar Hitnal
ಭಾರತ ರತ್ನ ಡಾ.ಬಿ.ಆರ್ ಅಂಬೇಡ್ಕರ್ ಜಯಂತಿಯನ್ನು ಕೊಪ್ಪಳ ನಗರದಲ್ಲಿ ಜಿಲ್ಲಾ ಕಾಂಗ್ರೆಸ್ನಿಂದ ಸರಳವಾಗಿ ಆಚರಿಸಲಾಯಿತು.
ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಕೆ. ರಾಜಶೇಖರ್ ಹಿಟ್ನಾಳ್ ನಿವಾಸದಲ್ಲಿ ಜಿಲ್ಲಾ ಕಾಂಗ್ರೆಸ್ ಮುಖಂಡರು ಅಂಬೇಡ್ಕರ್ ಜಯಂತಿ ಆಚರಿಸಿದರು. ಮಾಜಿ ಸಚಿವ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಶಿವರಾಜ ತಂಗಡಗಿ, ಶಾಸಕ ಕೆ. ರಾಘವೇಂದ್ರ ಹಿಟ್ನಾಳ್ ಸೇರಿದಂತೆ ಕಾಂಗ್ರೆಸ್ನ ಅನೇಕ ಮುಖಂಡರು ಪಾಲ್ಗೊಂಡಿದ್ದ ಈ ಕಾರ್ಯಕ್ರಮದಲ್ಲಿ ಸಂವಿಧಾನದ ಪೀಠಿಕೆಯನ್ನು ವಾಚಿಸುವ ಮೂಲಕ ಅಂಬೇಡ್ಕರ್ ಅವರಿಗೆ ಗೌರವ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಸಚಿವ ಶಿವರಾಜ ತಂಗಡಗಿ ಡಾ. ಬಾಬಾ ಸಾಹೇಬ್ ಅವರು ಜನಿಸಿದ ಈ ನಾಡಿನಲ್ಲಿ ನಾವು ಜನಿಸಿರೋದು ನಮ್ಮ ಪುಣ್ಯ. ಅಂತಹ ಮಹಾನ್ ವ್ಯಕ್ತಿ ನೀಡಿರುವ ಕೊಡುಗೆ ಸ್ಮರಣೀಯ ಎಂದು ಬಣ್ಣಿಸಿದರು.