ಕುಷ್ಟಗಿ: ಅಂಗನವಾಡಿ ನೌಕರರ ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿ ಅನಿರ್ದಿಷ್ಟವಾಧಿ ಹೋರಾಟವನ್ನು ಶುಕ್ರವಾರ ಅಂತ್ಯಗೊಳಿಸಲಾಯಿತು.
ಪ್ರತಿಭಟನೆ ಹಿಂಪಡೆದ ಅಂಗನವಾಡಿ ನೌಕರರು - Kushtagi in Koppala
ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿ ಕುಷ್ಟಗಿ ತಾಲೂಕಿನ ಸಿಡಿಪಿಒ ಕಚೇರಿ ಮುಂಭಾಗದಲ್ಲಿ 5ನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆಯನ್ನು ಅಂತ್ಯಗೊಳಿಸಲಾಯಿತು.
ತಾಲೂಕಿನ ಸಿಡಿಪಿಒ ಕಚೇರಿ ಮುಂಭಾಗದಲ್ಲಿ ನಡೆಯುತ್ತಿರುವ ಪ್ರತಿಭಟನೆ 5ನೇಯ ದಿನಕ್ಕೆ ಕಾಲಿಟ್ಟಿತ್ತು. ಸಂಘದ ಜಿಲ್ಕಾದ್ಯಕ್ಷೆ ಕಲಾವತಿ ಮೆಣೆದಾಳ ಮಾತನಾಡಿ, ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಡೆಯುತ್ತಿರುವ ಪ್ರತಿಭಟನೆಗೆ ಸರ್ಕಾರ ಸ್ಪಂದಿಸಲು ವಿಫಲವಾಗಿದೆ. ಈ ಹೋರಾಟ ಇಲ್ಲಿಗೆ ನಿಲ್ಲದು. ಅಗಸ್ಟ್ ತಿಂಗಳಲ್ಲಿ ಅಸಹಕಾರ ಚಳುವಳಿ ಆರಂಭಿಸುವುದಾಗಿ ಎಚ್ಚರಿಕೆ ನಿಡಿದರು. ಕೋವಿಡ್ ಇರುವವರೆಗೂ ಅಂಗನವಾಡಿ ಕೇಂದ್ರಗಳನ್ನು ಸ್ಯಾನಿಟೈಸ್ ಮಾಡಿ ವೈರಸ್ ಮುಕ್ತಗೊಳಿಸಬೇಕು. ಅಂಗನವಾಡಿ ನೌಕರರಿಗೆ ಗುಣಮಟ್ಟದ ಮಾಸ್ಕ್ ಸೇರಿದಂತೆ ಅಗತ್ಯ ಸುರಕ್ಷಾ ಸಾಮಗ್ರಿಗಳನ್ನು ಒದಗಿಸಬೇಕು ಎಂದು ಒತ್ತಾಯಿಸಿದರು. ಇದೇ ವೇಳೆ ಸಿಡಿಪಿಒ ಜಯಶ್ರೀ ಅವರಿಗೆ ಮನವಿ ಸಲ್ಲಿಸಲಾಯಿತು.