ಕುಷ್ಟಗಿ/ಕೊಪ್ಪಳ: ಅಂಗನವಾಡಿ ನೌಕರರ ಬೇಡಿಕೆ, ಈಡೇರಿಕೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರು ನಡೆಸುತ್ತಿರುವ ಪ್ರತಿಭಟನೆ ನಾಲ್ಕನೇ ದಿನಕ್ಕೆ ಮುಂದುವರೆದಿದೆ.
ಕೊಪ್ಪಳದಲ್ಲಿ ನಾಲ್ಕನೇ ದಿನಕ್ಕೆ ಕಾಲಿಟ್ಟ ಅಂಗನವಾಡಿ ನೌಕರರ ಪ್ರತಿಭಟನೆ - ರಾಜ್ಯದಲ್ಲಿ ಅಂಗನವಾಡಿ ನೌಕರರ ಪ್ರತಿಭಟನೆ
ಅಂಗನವಾಡಿ ನೌಕರರ ಬೇಡಿಕೆಗಳಿಗೆ ಸರ್ಕಾರ ಸ್ಪಂದಿಸದಿದ್ದರೆ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಳ್ಳಲಿದೆ ಎಂದು ಕೊಪ್ಪಳದಲ್ಲಿ ಆಶಾ ಕಾರ್ಯಕರ್ತೆಯರ ಜಿಲ್ಲಾಧ್ಯಕ್ಷೆ ಕಲಾವತಿ ಮೆಣೆದಾಳ ಎಚ್ಚರಿಸಿದ್ದಾರೆ.
ಕೊಪ್ಪಳದಲ್ಲಿ ನಾಲ್ಕನೇ ದಿನಕ್ಕೆ ಕಾಲಿಟ್ಟ ಅಂಗನವಾಡಿ ನೌಕರರ ಪ್ರತಿಭಟನೆ
ಕುಷ್ಟಗಿ ಪಟ್ಟಣದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಕಾರ್ಯಾಲಯದಲ್ಲಿ ಮಳೆ ವಾತಾವರಣದಲ್ಲೂ ಆಶಾ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿದರು. ಅಂಗನವಾಡಿ ಕಾರ್ಯಕರ್ತೆಯರನ್ನು ಮೇಲ್ವಿಚಾರಕ ಹುದ್ದೆಗೆ ಭರ್ತಿ ಮಾಡಬೇಕು, ಕೊರೊನಾ ವಾರಿಯರ್ಸ್ ಸೇವೆಯಲ್ಲಿರುವ ಅಂಗನವಾಡಿ ಕಾರ್ಯಕರ್ತೆಯರಿಗೆ ಪಿಪಿಇ ಕಿಟ್, ಮಾಸ್ಕ್, ಸ್ಯಾನಿಟೈಸರ್, ಹ್ಯಾಂಡ್ ಗ್ಲೌಸ್ ವಿತರಿಸಬೇಕು.
ಪೂರ್ವ ಪ್ರಾಥಮಿಕ ಶಿಕ್ಷಣ ಎಲ್ ಕೆಜಿ, ಯುಕೆಜಿ ಅಂಗನವಾಡಿ ಕೇಂದ್ರದಲ್ಲಾಗಬೇಕು. ಖಾಲಿ ಇರುವ ಅಂಗನವಾಡಿ ಹುದ್ದೆ ಭರ್ತಿ ಮಾಡಬೇಕು ಎಂದು ಅವರು ಒತ್ತಾಯಿಸಿದರು.