ಗಂಗಾವತಿ /ಕೊಪ್ಪಳ:ಕಾರ್ಮಿಕ ವಲಯಕ್ಕೆ ಕೊರೊನಾ ಪ್ಯಾಕೇಜ್ ನೀಡಿದಂತೆ ನಮಗೂ ವಿಶೇಷ ಪರಿಹಾರದ ಪ್ಯಾಕೇಜ್ ಘೋಷಿಸಬೇಕು ಎಂದು ಒತ್ತಾಯಿಸಿ ಖಾಸಗಿ ಶಿಕ್ಷಣ ಸಂಸ್ಥೆಗಳ ಶಿಕ್ಷಕರು ಬಿಇಒ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಖಾಸಗಿ ಶಾಲಾ ಶಿಕ್ಷಕರಿಗೂ ಕೊರೊನಾ ಪ್ಯಾಕೇಜ್ ಘೋಷಿಸುವಂತೆ ಒತ್ತಾಯ - ಖಾಸಗಿ ಶಾಲಾ ಶಿಕ್ಷಕರಿಗೆ ಕೊರೊನಾ ಪ್ಯಾಕೇಜ್
ಕೋವಿಡ್-19 ಹಿನ್ನೆಲೆ ಮಾರ್ಚ್ ತಿಂಗಳಿನಿಂದ ಇಲ್ಲಿಯವರೆಗೆ ಖಾಸಗಿ ಶಾಲಾ ಶಿಕ್ಷಕರಿಗೆ ಸಂಬಳವಿಲ್ಲದೇ ಸಂಕಷ್ಟ ಎದುರಿಸುತ್ತಿದ್ದು, ಸರ್ಕಾರ ಸೂಕ್ತ ಪರಿಹಾರದ ಪ್ಯಾಕೇಜ್ ಘೋಷಿಸಬೇಕು ಎಂದು ಮನವಿ ಮಾಡಿದರು.

Koppal
ತಾಲೂಕು ಅನುದಾನ ರಹಿತ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಮನೋಜ್ ಸ್ವಾಮಿ ಹಿರೇಮಠ ನೇತೃತ್ವದಲ್ಲಿ ಇಲ್ಲಿನ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಗೆ ತೆರಳಿದ ನೂರಾರು ಶಿಕ್ಷಕರು, ಬಿಇಒ ಸೋಮಶೇಖರಗೌಡ ಅವರಿಗೆ ಮನವಿ ಸಲ್ಲಿಸಿ ಸರ್ಕಾರಕ್ಕೆ ತಲುಪಿಸುವಂತೆ ತಿಳಿಸಿದರು.
ಈ ಕುರಿತು ಮಾತನಾಡಿದ ಮನೋಜ್ ಸ್ವಾಮಿ, ಕೋವಿಡ್-19 ಹಿನ್ನೆಲೆ ಅನೇಕ ವರ್ಗಗಳಿಗೆ, ಕಾರ್ಮಿಕರ ಸಂಕಷ್ಟಕ್ಕೆ ನಮ್ಮ ಸರ್ಕಾರ ಸ್ಪಂದಿಸಿದೆ. ಆದರೆ, ಮಾರ್ಚ್ ತಿಂಗಳಿನಿಂದ ಇಲ್ಲಿಯವರೆಗೆ ಖಾಸಗಿ ಶಾಲಾ ಶಿಕ್ಷಕರಿಗೆ ಸಂಬಳವಿಲ್ಲದೇ ಸಂಕಷ್ಟ ಎದುರಿಸುತ್ತಿದ್ದು, ಸರ್ಕಾರ ಸೂಕ್ತ ಪರಿಹಾರದ ಪ್ಯಾಕೇಜ್ ಘೋಷಣೆ ಮಾಡಬೇಕು ಎಂದು ಮನವಿ ಮಾಡಿದರು.