ಕೊಪ್ಪಳ: ಪಶು ಸಂಗೋಪನಾ ಇಲಾಖೆ ಸಚಿವ ಪ್ರಭು ಚವ್ಹಾಣ್ ಅವರಿಗೆ ಕೊಪ್ಪಳದಲ್ಲಿ ಮುತ್ತಿಗೆ ಹಾಕಲು ಯತ್ನಿಸಿದ ದಲಿತ ಸಂಘಟನೆಯ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.
ಸಚಿವ ಪ್ರಭು ಚವ್ಹಾಣ್ಗೆ ಮುತ್ತಿಗೆ ಹಾಕಲು ಯತ್ನ: ದಲಿತ ಸಂಘಟನೆ ಕಾರ್ಯಕರ್ತರ ಬಂಧನ - Sadashiva Commission
ಸದಾಶಿವ ಆಯೋಗ ವರದಿ ಜಾರಿಗೆ ನಾವು ಒಪ್ಪುವುದಿಲ್ಲ ಎಂದು ಸಚಿವ ಪ್ರಭು ಚವ್ಹಾಣ್ ಹೇಳಿಕೆ ನೀಡಿರುವುದನ್ನು ವಿರೋಧಿಸಿ ಇಂದು ಸಚಿವರಿಗೆ ಮುತ್ತಿಗೆ ಹಾಕಲು ಯತ್ನಿಸಿದ ದಲಿತ ಸಂಘಟನೆ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.
ಸಚಿವ ಪ್ರಭು ಚವ್ಹಾಣ್
ಸದಾಶಿವ ಆಯೋಗ ವರದಿ ಜಾರಿಗೆ ನಾವು ಒಪ್ಪುವುದಿಲ್ಲ ಎಂದು ಸಚಿವ ಪ್ರಭು ಚವ್ಹಾಣ್ ನಿನ್ನೆ ಕೊಪ್ಪಳ ತಾಲೂಕಿನ ಬಹದ್ದೂಬಂಡಿ ಗ್ರಾಮದಲ್ಲಿ ಹೇಳಿಕೆ ನೀಡಿದ್ದರು. ಸಚಿವರ ಈ ಹೇಳಿಕೆ ಖಂಡಿಸಿ ದಲಿತ ಸಂಘಟನೆಯ ಕಾರ್ಯಕರ್ತರು ನಗರದ ಜಿಲ್ಲಾಡಳಿತ ಭವನದ ಮುಂದೆ ಧಿಕ್ಕಾರ ಕೂಗಿ, ಮುತ್ತಿಗೆ ಹಾಕಲು ಯತ್ನಿಸಿದರು.
ಈ ಸಂದರ್ಭದಲ್ಲಿ ದಲಿತ ಸಂಘಟನೆ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು. ಪ್ರತಿಭಟನಾಕಾರರ ಬಂಧನದ ಬಳಿಕ ಪೊಲೀಸರ ಭದ್ರತೆಯಲ್ಲಿ ಸಚಿವರು ಡಿಸಿ ಕಚೇರಿಗೆ ಆಗಮಿಸಿದರು.
Last Updated : Sep 1, 2021, 12:42 PM IST