ಕೊಪ್ಪಳ: ಮಾಸಿಕ ಗೌರವಧನ ₹ 12 ಸಾವಿರ ನೀಡಬೇಕೆನ್ನುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ನಗರದ ಅಶೋಕ ಸರ್ಕಲ್ನಲ್ಲಿ ಆಶಾ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿದರು.
ಬೇಡಿಕೆಗಳು ಈಡೇರದಿದ್ದರೆ ಹೋರಾಟ ನಿಲ್ಲಿಸುವುದಿಲ್ಲ: ಆಶಾ ಕಾರ್ಯಕರ್ತೆಯರ ಎಚ್ಚರಿಕೆ - ಕೊಪ್ಪಳ ಜಿಲ್ಲಾ ಸುದ್ದಿ
ಮಾಸಿಕ ಗೌರವ ಧನ ₹ 12 ಸಾವಿರ ನೀಡಬೇಕೆನ್ನುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕೊಪ್ಪಳದ ಅಶೋಕ ಸರ್ಕಲ್ನಲ್ಲಿ ಆಶಾ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿ, ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಅಶಾ ಕಾರ್ಯಕರ್ತೆಯರ ಪ್ರತಿಭಟನೆ
ಸರ್ಕಾರಕ್ಕೆ ಈಗಾಗಲೇ ಸಾಕಷ್ಟು ಬಾರಿ ಪ್ರತಿಭಟನೆ ಮೂಲಕ ಆಗ್ರಹಿಸಲಾಗಿದೆ. ಜುಲೈ 10ರಿಂದ ಆರೋಗ್ಯ ಸೇವೆ ಸ್ಥಗಿತಗೊಳಿಸಿ, ಜನಪ್ರತಿನಿಧಿಗಳ ಮೂಲಕವೂ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ. ಆದರೂ ಈ ಬಗ್ಗೆ ಈವರೆಗೆ ಗಮನ ಹರಿಸಿಲ್ಲವೆಂದು ಪ್ರತಿಭಟನಾಕಾರರು ಕಿಡಿಕಾರಿದರು.
ಕೊರೊನಾ ಸಂಕಷ್ಟದ ಸಂದರ್ಭದಲ್ಲಿ ಜೀವ ಪಣಕ್ಕಿಟ್ಟು ಕೆಲಸ ಮಾಡುತ್ತಿದ್ದೇವೆ. ಸುರಕ್ಷತಾ ಪರಿಕರಗಳ ಜೊತೆಗೆ ಮಾಸಿಕ ಗೌರವ ಧನ ₹ 12 ಸಾವಿರ ನೀಡಬೇಕು. ಇಲ್ಲವಾದಲ್ಲಿ ಹೋರಾಟ ನಿಲ್ಲಿಸುವುದಿಲ್ಲ ಎಂದು ಸರ್ಕಾರಕ್ಕೆ ಎಚ್ಚರಿಕೆ ರವಾನಿಸಿದರು.