ಗಂಗಾವತಿ:ಹುಲ್ಲು ಮೇಯುತ್ತಾ ಹೊಲಕ್ಕೆ ಆಕಳು ನುಗ್ಗಿದ್ದು ಜಮೀನು ಮಾಲೀಕ ದಲಿತ ಮಹಿಳೆಯೊಬ್ಬರ ಮೇಲೆ ಹಲ್ಲೆ ಮಾಡಿದ್ದ ಘಟನೆ ಇತ್ತೀಚೆಗೆ ನಡೆದಿತ್ತು. ಇದೀಗ ಹಲ್ಲೆ ಮಾಡಿದ ವ್ಯಕ್ತಿಯನ್ನು ಬಂಧಿಸಿರುವ ಕನಕಗಿರಿ ಪೊಲೀಸರು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಕನಕಗಿರಿ ತಾಲ್ಲೂಕಿನ ರಾಂಪೂರ ಗ್ರಾಮದ ಅಮರೇಶಪ್ಪ ಕಲ್ಲಪ್ಪ ಕುಂಬಾರ ಪ್ರಕರಣದ ಆರೋಪಿ.
ಮಹಿಳೆ ನೀಡಿದ ಹಲ್ಲೆ, ಜಾತಿ ನಿಂದನೆ ದೂರಿನ ಹಿನ್ನೆಲೆಯಲ್ಲಿ ಕಾರ್ಯಪ್ರವೃತ್ತರಾಗಿದ್ದ ಕನಕಗಿರಿ ಪೊಲೀಸರು ಆರೋಪಿ ವಿರುದ್ಧ ಕ್ರಮ ತೆಗೆದುಕೊಂಡಿದ್ದಾರೆ. ಗಾಯಾಳು ಮಹಿಳೆಯನ್ನು ಶೋಭಾ ರಮೇಶ ಪೂಜಾರ (30) ಎಂದು ಗುರುತಿಸಲಾಗಿದೆ. ಕನಕಗಿರಿಯ ಸಮುದಾಯ ಆಸ್ಪತ್ರೆಯಲ್ಲಿ ಮಹಿಳೆಗೆ ಪ್ರಾಥಮಿಕ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಗಂಗಾವತಿಯ ಸಾರ್ವಜನಿಕ ಉಪ ವಿಭಾಗ ಆಸ್ಪತ್ರೆಗೆ ದಾಖಲಿಸಲಾಗಿತ್ತು.