ಗಂಗಾವತಿ (ಕೊಪ್ಪಳ): ಅಕ್ಟೋಬರ್ 23ರಂದು ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆ ಹಿನ್ನೆಲೆ, ಗಂಗಾವತಿ ತಾಲೂಕಿನಲ್ಲಿ ಸ್ಥಾಪಿಸಲಾದ ಮತಗಟ್ಟೆಗಳಿಗೆ ಸಹಾಯಕ ಆಯುಕ್ತ ನಾರಾಯಣ ಕನಕರೆಡ್ಡಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆ: ಮತದಾನ ಕೇಂದ್ರಗಳನ್ನು ಪರಿಶೀಲಿಸಿದ ಎಸಿ - ಗಂಗಾವತಿ ಲೇಟೆಸ್ಟ್ ನ್ಯೂಸ್
ಗಂಗಾವತಿ ತಾಲೂಕಿನಲ್ಲಿ ಸ್ಥಾಪಿಸಲಾದ ಮತಗಟ್ಟೆಗಳಿಗೆ ಸಹಾಯಕ ಆಯುಕ್ತ ನಾರಾಯಣ ಕನಕರೆಡ್ಡಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.
![ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆ: ಮತದಾನ ಕೇಂದ್ರಗಳನ್ನು ಪರಿಶೀಲಿಸಿದ ಎಸಿ Assistant Commissioner Narayana Kanaka reddy inspected polling stations](https://etvbharatimages.akamaized.net/etvbharat/prod-images/768-512-9127651-1007-9127651-1602337588317.jpg)
ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆ: ಮತದಾನ ಕೇಂದ್ರಗಳನ್ನು ಪರಿಶೀಲಿಸಿದ ಎಸಿ
ಮತಕೇಂದ್ರದಲ್ಲಿ ಸೂಕ್ತ ಭದ್ರತೆ ಹಾಗೂ ಶುದ್ಧ ಬೆಳಕು-ಗಾಳಿ ಬರುವಂತೆ ವ್ಯವಸ್ಥೆ ಮಾಡುವಂತೆ ತಹಶೀಲ್ದಾರ್ ರೇಣುಕಾ ಹಾಗೂ ಚುನಾವಣಾ ವಿಭಾಗದ ಸಿಬ್ಬಂದಿಗೆ ಸೂಚನೆ ನೀಡಿದರು. ಕೊರೊನಾದ ಬಳಿಕ ಎದುರಾಗುತ್ತಿರುವ ಮೊದಲ ಚುನಾವಣೆ ಹಿನ್ನೆಲೆ, ಸ್ಯಾನಿಟೈಸರ್, ಸಾಮಾಜಿಕ ಅಂತರ, ಕುಡಿಯುವ ನೀರಿನ ವ್ಯವಸ್ಥೆ ಮಾಡುವಂತೆ ಸೂಚಿಸಿದರು.
ಗಂಗಾವತಿ ನಗರದ ಬಾಲಕರ ಸರ್ಕಾರಿ ಕಾಲೇಜು, ವೆಂಕಟಗಿರಿ, ಮರಳಿ, ಕಾರಟಗಿ ಮತ್ತು ಕನಕಗಿರಿ ಪಟ್ಟಣಗಳಲ್ಲಿನ ಮತಕೇಂದ್ರಗಳಿಗೆ ತೆರಳಿ ವೀಕ್ಷಣೆ ಮಾಡಿದರು.