ಗಂಗಾವತಿ: ತಾಲೂಕಿನ ಐತಿಹಾಸಿಕ ಹಾಗೂ ಧಾರ್ಕಮಿಕ ಪುಣ್ಯ ಕ್ಷೇತ್ರವಾದ ಅಂಜನಾದ್ರಿ ಬೆಟ್ಟಕ್ಕೆ ಬರುವ ಭಕ್ತಾಧಿಗಳಿಗೆ ಷರತ್ತು ಬದ್ಧ ದರ್ಶನಕ್ಕೆ ಅವಕಾಶ ನೀಡಿ ಸಹಾಯಕ ಆಯುಕ್ತ ನಾರಾಯಣ ಕನಕರೆಡ್ಡಿ ಆದೇಶ ಹೊರಡಿಸಿದ್ದಾರೆ.
ಅಂಜನಾದ್ರಿ ಬೆಟ್ಟಕ್ಕೆ ಷರತ್ತು ಬದ್ಧ ಅನುಮತಿ ನೀಡಿದ ಸಹಾಯಕ ಆಯುಕ್ತರು - Restriction to Anjanadri hill
ಚಿರತೆಗಳ ಹಾವಳಿಯಿಂದಾಗಿ ಕಳೆದ ಎರಡು ವಾರಗಳಿಂದ ಆನೆಗೊಂದಿ, ದುರ್ಗಾ ಬೆಟ್ಟ, ಅಂಜನಾದ್ರಿ ಬೆಟ್ಟಕ್ಕೆ ನಿರ್ಬಂಧ ಹೇರಲಾಗಿತ್ತು. ಇದೀಗ ಚಿರತೆ ಹಾವಳಿ ಕಡಿಮೆಯಾಗಿದ್ದು, ಭಕ್ತರ ಮನವಿಯಿಂದ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.
ಅಂಜನಾದ್ರಿ ಬೆಟ್ಟ
ಆದಿಶಕ್ತಿ ದುರ್ಗಾದೇವಿ ದೇಗುಲದ ಸಿಬ್ಬಂದಿ ಮೇಲೆ ದಾಳಿ ಮಾಡಿ ಯುವಕನ ಸಾವಿಗೆ ಕಾರಣವಾಗಿದ್ದ ಚಿರತೆಗಳ ಹಾವಳಿಯಿಂದಾಗಿ ಕಳೆದ ಎರಡು ವಾರಗಳಿಂದ ಆನೆಗೊಂದಿ, ದುರ್ಗಾ ಬೆಟ್ಟ, ಅಂಜನಾದ್ರಿ ಬೆಟ್ಟಕ್ಕೆ ನಿರ್ಬಂಧ ಹೇರಲಾಗಿತ್ತು. ಇದೀಗ ಚಿರತೆ ಹಾವಳಿ ಕಡಿಮೆಯಾಗಿದ್ದು, ಭಕ್ತರು ದೇವರ ದರ್ಶನಕ್ಕೆ ಅವಕಾಶ ನೀಡುವಂತೆ ಮನವಿ ಮಾಡಿದ ಹಿನ್ನೆಲೆಯಲ್ಲಿ ಕಂದಾಯ ಇಲಾಖೆಯ ಮನವಿ ಮೆರೆಗೆ ಸಹಾಯಕ ಆಯುಕ್ತರು ಈ ಆದೇಶ ಮಾಡಿದ್ದಾರೆ.
ಬೆಳಗ್ಗೆ 8 ಗಂಟೆಯಿಂದ ಮಧ್ಯಾಹ್ನ 3ರ ವರೆಗೆ ಮಾತ್ರ ದೇಗುಲಕ್ಕೆ ಭಕ್ತರು ಆಗಮಿಸಿ ದರ್ಶನ ಮಾಡಬಹುದು. ನಾನಾ ಧಾರ್ಮಿಕ ಕಾರ್ಯ ಕೈಗೊಳ್ಳಬಹುದು ಎಂದು ಎಸಿ ಆದೇಶದಲ್ಲಿ ತಿಳಿಸಿದ್ದಾರೆ.