ಕೊಪ್ಪಳ : ತುಂಗಭದ್ರಾ ಡ್ಯಾಂನ ಸಮಾನಂತರ ಜಲಾಶಯ ನಿರ್ಮಾಣ ವಿಚಾರವಾಗಿ ಮೂರು ಜಿಲ್ಲೆಗಳ ಜನಪ್ರತಿನಿಧಿಗಳು ಸೇರಿ ಸಿಎಂ ಯಡಿಯೂರಪ್ಪ ಅವರನ್ನು ಭೇಟಿ ಮಾಡುತ್ತೇವೆ ಎಂದು ಜಿಲ್ಲೆಯ ಕನಕಗಿರಿ ಶಾಸಕ ಬಸವರಾಜ ದಡೇಸೂಗೂರು ಹೇಳಿದ್ದಾರೆ.
ತುಂಗಭದ್ರಾ ಜಲಾಶಯದ ಹೂಳು ತೆಗೆಯುವುದು ಅಸಾಧ್ಯ.. ಬಸವರಾಜ ದಡೇಸೂಗೂರು ಅಭಿಪ್ರಾಯ.. - ಕೊಪ್ಪಳ ಜಿಲ್ಲಾ ಸುದ್ದಿ
ತುಂಗಭದ್ರಾ ಅಣೆಕಟ್ಟು ಕೊಪ್ಪಳ, ಬಳ್ಳಾರಿ ಹಾಗೂ ರಾಯಚೂರು ಜಿಲ್ಲೆಯ ಲಕ್ಷಾಂತರ ರೈತರ ಜೀವನಾಡಿ. ಅಣೆಕಟ್ಟಿನಲ್ಲಿ ಸುಮಾರು 30 ಟಿಎಂಸಿಗೂ ಹೆಚ್ಚು ಹೂಳು ತುಂಬಿಕೊಂಡಿದೆ. ಹೂಳು ತೆಗೆಯುವುದು ಅಸಾಧ್ಯವಾದ ಹಿನ್ನೆಯಲ್ಲಿ ಪರ್ಯಾಯವಾಗಿ ಸಮಾನಾಂತರ ಜಲಾಶಯ ನಿರ್ಮಾಣ ಮಾಡುವುದು ಒಳಿತು ಎಂಬ ಅಭಿಪ್ರಾಯವಿದೆ ಎಂದು ಕನಕಗಿರಿ ಶಾಸಕ ಬಸವರಾಜ ದಡೇಸೂಗೂರು ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತುಂಗಭದ್ರಾ ಅಣೆಕಟ್ಟು ಕೊಪ್ಪಳ, ಬಳ್ಳಾರಿ ಹಾಗೂ ರಾಯಚೂರು ಜಿಲ್ಲೆಯ ಲಕ್ಷಾಂತರ ರೈತರ ಜೀವನಾಡಿ. ಅಣೆಕಟ್ಟಿನಲ್ಲಿ ಸುಮಾರು 30 ಟಿಎಂಸಿಗೂ ಹೆಚ್ಚು ಹೂಳು ತುಂಬಿ ಕೊಂಡಿದೆ. ಹೂಳು ತೆಗೆಯುವುದು ಅಸಾಧ್ಯವಾದ ಹಿನ್ನೆಯಲ್ಲಿ ಪರ್ಯಾಯವಾಗಿ ಸಮನಾಂತರ ಜಲಾಶಯ ನಿರ್ಮಾಣ ಮಾಡುವುದು ಒಳಿತು ಎಂಬ ಅಭಿಪ್ರಾಯವಿದೆ. ಹೀಗಾಗಿ ಸಮನಾಂತರ ಜಲಾಶಯ ನಿರ್ಮಾಣಕ್ಕೆ ಜಿಲ್ಲೆಯ ಕನಕಗಿರಿ ತಾಲೂಕಿನ ನವಲಿ ಬಳಿ ಈಗಾಗಲೇ ಮೊದಲ ಹಂತದ ಸ್ಥಳ ಪರಿಶೀಲನೆ ಕಾರ್ಯ ಮುಗಿದಿದ್ದು, ಸುಮಾರು ಹತ್ತು ಸಾವಿರ ಕೋಟಿ ವೆಚ್ಚದಲ್ಲಿ ಸಮನಾಂತರ ಜಲಾಶಯ ನಿರ್ಮಾಣ ಮಾಡಬಹುದು ಎಂದು ಅಂದಾಜಿಸಲಾಗಿದೆ ಎಂದರು.
ಟೆಂಡರ್ ಕರೆಯಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಅನುಮತಿ ನೀಡುವಂತೆ ಇಂದು ಪಕ್ಷಾತೀತವಾಗಿ ಮೂರೂ ಜಿಲ್ಲೆಗಳ ಜನಪ್ರತಿನಿಧಿಗಳು ಸಿಎಂ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸುತ್ತೇವೆ ಎಂದು ಶಾಸಕ ಬಸವರಾಜ ದಡೇಸೂಗೂರು ತಿಳಿಸಿದರು.