ಕೊಪ್ಪಳ:- ಗ್ರಾಮದೊಳಗೆ ಕಾಣಿಸಿಕೊಂಡಿದ್ದ ಕರಡಿಯನ್ನು ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಯಶಸ್ವಿಯಾಗಿದ್ದಾರೆ.
ಕೊಪ್ಪಳದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿಯಿಂದ ಕರಡಿ ಸೆರೆ
ಕೊಪ್ಪಳ:- ಗ್ರಾಮದೊಳಗೆ ಕಾಣಿಸಿಕೊಂಡಿದ್ದ ಕರಡಿಯನ್ನು ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಯಶಸ್ವಿಯಾಗಿದ್ದಾರೆ.
ನಿನ್ನೆ ರಾತ್ರಿ ಅಡವಿಭಾವಿ ತಾಂಡಾದಲ್ಲಿ ಮೂರು ವರ್ಷದ ಹೆಣ್ಣು ಕರಡಿ ಪ್ರತ್ಯಕ್ಷವಾಗಿತ್ತು. ಕರಡಿಯನ್ನು ಸೆರೆ ಹಿಡಿಯುವಂತೆ ಸ್ಥಳೀಯರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು. ಅರಣ್ಯ ಇಲಾಖೆಯವರು ಅರವಳಿಕೆ ನೀಡಿ ಕರಡಿ ಸೆರೆ ಹಿಡಿದಿದ್ದಾರೆ. ಇದರಿಂದಾಗಿ ಸ್ಥಳೀಯರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.