ಕೊಪ್ಪಳ:ಎತ್ತಿನಬಂಡಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತಾಲೂಕಿನ ಇರಕಲ್ ಗಡಾ ಗ್ರಾಮದ ಬಳಿ ನಡೆದಿದೆ.
ಎತ್ತಿನಬಂಡಿಗೆ ದ್ವಿಚಕ್ರ ವಾಹನ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು - ಎತ್ತಿನಬಂಡಿಗೆ ಬೈಕ್ ಡಿಕ್ಕಿ
ಕೊಪ್ಪಳದ ಗ್ರಾಮವೊಂದರಲ್ಲಿ ಎತ್ತಿನಬಂಡಿಗೆ ಬೈಕ್ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಬೈಕ್ ಸವಾರ ಸ್ಥಳದಲ್ಲೇ ಸಾವು
ಮೃತ ವ್ಯಕ್ತಿಯನ್ನು ಮಾರುತೆಪ್ಪ ಭರಮಗೌಡರ (28) ಎಂದು ಗುರುತಿಸಲಾಗಿದೆ. ಈತ ಕೊಪ್ಪಳ ತಾಲೂಕಿನ ಚಾಮಲಾಪುರ ಗ್ರಾಮದ ನಿವಾಸಿಯಾಗಿದ್ದು ಕೊಪ್ಪಳದಿಂದ ಚಾಮಲಾಪುರ ಗ್ರಾಮಕ್ಕೆ ತೆರಳುತ್ತಿದ್ದಾಗ ಈ ಘಟನೆ ಸಂಭವಿಸಿದೆ.
ಕೊಪ್ಪಳ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.