ಗಂಗಾವತಿ:ಬೈಕ್ ಸ್ಕಿಡ್ ಆಗಿ ರಸ್ತೆಗೆ ಬಿದ್ದ ಸವಾರನ ಮೇಲೆ ಕೆಎಸ್ಆರ್ಟಿಸಿ ಬಸ್ ಹರಿದು, ಯುವಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಗರದ ಇಂದಿರಾ ವೃತ್ತದಲ್ಲಿ ನಡೆದಿದೆ.
ಮೃತ ಯುವಕನನ್ನು ಕೇಂದ್ರ ಬಸ್ ನಿಲ್ದಾಣ ಸಮೀಪದ ಅಯ್ಯಂಗಾರ್ ಬೇಕರಿಯ ಮಾಲೀಕ ಶಿವಶಂಕರ್ ಪುಟ್ಟೇಗೌಡ (25) ಎಂದು ಗುರುತಿಸಲಾಗಿದೆ. ಮೂಲತಃ ಹಾಸನ ಜಿಲ್ಲೆಯ ಈ ಯುವಕ ಕಳೆದ ಒಂದು ದಶಕದಿಂದ ಬೇಕರಿ ಉದ್ಯಮದಲ್ಲಿ ತೊಡಗಿಕೊಂಡಿದ್ದರು.
ಕೇಂದ್ರ ಬಸ್ ನಿಲ್ದಾಣದಿಂದ ಜುಲೈ ನಗರಕ್ಕೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ. ಬೈಕ್ನ ಸ್ಟ್ಯಾಂಡ್ ರಸ್ತೆಗೆ ತಗುಲಿದ್ದರಿಂದ ಸ್ಕಿಡ್ ಆಗಿ ರಸ್ತೆ ಮೇಲೆ ಬಿದ್ದಿದ್ದಾರೆ. ಇದೇ ಸಂದರ್ಭದಲ್ಲಿ ಹಿಂದಿನಿಂದ ರಭಸವಾಗಿ ಬಂದ ಸಾರಿಗೆ ವಾಹನ ಹರಿದು ಶಿವಶಂಕರ್ ಮೃತಪಟ್ಟಿದ್ದಾನೆ. ಈ ಕುರಿತು ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಪೆಟ್ರೋಲಿಯಂ ಉತ್ಪನ್ನ ಅಕ್ರಮ ದಾಸ್ತಾನು.. 12.5 ಲಕ್ಷ ರೂ ಮೌಲ್ಯದ ಸ್ವತ್ತು ಜಪ್ತಿ
ಸ್ಥಳಕ್ಕೆ ಡಿವೈಎಸ್ಪಿ ರುದ್ರೇಶ್ ಉಜ್ಜನಕೊಪ್ಪ, ನಗರ ಠಾಣೆಯ ಪಿಐ ವೆಂಕಟಸ್ವಾಮಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.